ಜನರನ್ನು ಹಗಲು ದರೋಡೆ ಮಾಡಿ ಟ್ವೀಟ್ ನಲ್ಲಿ ಅಭಿನಂದನೆ: ನಳಿನ್ ಕುಮಾರ್ ವಿರುದ್ಧ ಕಾಂಗ್ರೆಸ್ ಕಿಡಿ
ಮಂಗಳೂರಿನ ಸುರತ್ಕಲ್ ಟೋಲ್ ವಿರೋಧಿಸಿ ರಾತ್ರಿ ಹಗಲು ನಡೆಯುತ್ತಿರುವ ಧರಣಿಗೆ ಫಲ ದೊರೆಯುವ ಲಕ್ಷಣ ಗೋಚರವಾಗಿದೆ. ಆದರೆ, ಕಳೆದ ಆರು ವರ್ಷಗಳಿಂದ ಜನರನ್ನು ದರೋಡೆ ಮಾಡಿದ ಟೋಲ್ ರದ್ಧತಿ ಬಗ್ಗೆ ಸಂಸದರು ತಮ್ಮ ಟ್ವೀಟ್ ನಲ್ಲಿ ಅಭಿನಂದನೆ ಸಲ್ಲಿಸಿರುವುದು ಕುಹಕವಷ್ಟೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಅಮಲ ರಾಮಚಂದ್ರ ಹೇಳಿದ್ದಾರೆ.
ಅವರು ಮಲ್ಲಿಕಟ್ಟೆಯಲ್ಲಿರೋ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದ ನಳಿನ್ ಕುಮಾರ್ ಟೋಲ್ ರದ್ದತಿಯ ತಾಂತ್ರಿಕ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಹೇಳುತ್ತಾ ಅಭಿನಂದನೆ ಸಲ್ಲಿಸಿದ್ದಾರೆ. ಅವರು ಅಭಿನಂದನೆ ಹೇಳುವುದಲ್ಲ. ಬದಲಾಗಿ ತಾತ್ಕಾಲಿಕ ನೆಲೆಯಲ್ಲಿ ಕಾರ್ಯಾರಂಭಿಸಿ ಕಳೆದ ಆರು ವರ್ಷಗಳಿಂದ ಜನರನ್ನು ದರೋಡೆ ಮಾಡುತ್ತಿದ್ದ ಅಕ್ರಮ ಟೋಲ್ ಅನ್ನು ರದ್ದುಪಡಿಸಲು ವಿಳಂಬವಾದ ಬಗ್ಗೆ ಜನರಲ್ಲಿ ಕ್ಷಮೆಯಾಚಿಸಬೇಕಿತ್ತು ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka