ದಲಿತರಿಗೆ ಉದ್ಯೋಗ ನೀಡಬೇಕಾಗುತ್ತದೆ ಎಂದು 5 ಲಕ್ಷ ಹುದ್ದೆಗಳನ್ನು ಬಿಜೆಪಿ ಖಾಲಿ ಬಿಟ್ಟಿದೆ: ಮಲ್ಲಿಕಾರ್ಜುನ ಖರ್ಗೆ
ದಲಿತ ಹಾಗೂ ಬುಡಕಟ್ಟು ಜನಾಂಗಕ್ಕೆ ಉದ್ಯೋಗ ನೀಡಬೇಕಾಗುತ್ತದೆ ಅನ್ನೋ ಕಾರಣಕ್ಕೆ ಗುಜರಾತ್ ನಲ್ಲಿ ಬಿಜೆಪಿ ಸರ್ಕಾರವು 5 ಲಕ್ಷ ಹುದ್ದೆಗಳನ್ನು ಇನ್ನೂ ಭರ್ತಿ ಮಾಡಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಎಸ್ ಟಿ ಮೀಸಲು ವಿಧಾನಸಭಾ ಕ್ಷೇತ್ರವಾದ ಭಿಲೋಡಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರಿ ಹಾಗೂ ಅರೆ ಸರ್ಕಾರಿ ಇಲಾಖೆಗಳು ಸಂಸ್ಥೆಗಳಲ್ಲಿ ಖಾಲಿ ಇರುವ 5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡದೇ ಹಾಗೆಯೇ ಬಿಡಲಾಗಿದೆ. ಹುದ್ದೆಗಳನ್ನು ಭರ್ತಿ ಮಾಡಿದರೆ 5 ಲಕ್ಷ ಉದ್ಯೋಗಗಳ ಪೈಕಿ ಅರ್ಧದಷ್ಟು ಉದ್ಯೋಗಗಳು ದಲಿತ, ಬುಡಕಟ್ಟು, ಹಿಂದುಳಿದ ಸಮುದಾಯಗಳಿಗೆ ಹೋಗುತ್ತವೆ ಎಂಬ ಕಾರಣಕ್ಕಾಗಿ ಸರ್ಕಾರ ಹುದ್ದೆಗಳನ್ನು ಭರ್ತಿ ಮಾಡಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ಸ್ಥಳೀಯ ನಾಯಕರು ಡಬಲ್ ಇಂಜಿನ್ ಸರ್ಕಾರದ ಬಗ್ಗೆ ಮಾತನಾಡುತ್ತಾರೆ ಆದರೆ 6 ವರ್ಷಗಳಲ್ಲಿ ಮೂವರು ಮುಖ್ಯಮಂತ್ರಿಗಳು ಬದಲಾಗಿದ್ದು, ಇಂಜಿನ್ ಯಾಕೆ ವಿಫಲವಾಯಿತು ಎಂದು ಖರ್ಗೆ ಪ್ರಶ್ನಿಸಿದ್ದಾರೆ.
ಬಿಜೆಪಿ ಗುಜರಾತ್ ನಲ್ಲಿ ಕಾಂಗ್ರೆಸ್ ವಿರುದ್ಧದ ಪ್ರಚಾರಕ್ಕೆ ಪಕ್ಷದ 5 ಮುಖ್ಯಮಂತ್ರಿಗಳು, 40 ಕೇಂದ್ರ ಸಚಿವರು, 150 ಸಚಿವರ ಸೇನೆಯನ್ನು ನೆರೆ ರಾಜ್ಯಗಳಿಂದ ಕರೆದುಕೊಂಡುಬಂದಿದೆ ಎಂದು ಖರ್ಗೆ ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka