ಈಶಾನ್ಯ ರಾಜ್ಯದಲ್ಲಿ ಅಕ್ರಮ ಮತದಾನದ ಆರೋಪ: 47 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಕಾಂಗ್ರೆಸ್ ಒತ್ತಾಯ - Mahanayaka

ಈಶಾನ್ಯ ರಾಜ್ಯದಲ್ಲಿ ಅಕ್ರಮ ಮತದಾನದ ಆರೋಪ: 47 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಕಾಂಗ್ರೆಸ್ ಒತ್ತಾಯ

20/04/2024

ಮಣಿಪುರದ 47 ಮತಗಟ್ಟೆಗಳಲ್ಲಿ ಬೂತ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈಶಾನ್ಯ ರಾಜ್ಯದ ಎರಡು ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಒಟ್ಟು 47 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಒತ್ತಾಯಿಸಿದೆ.


Provided by

ಸಂಘರ್ಷ ಪೀಡಿತ ಮಣಿಪುರದಲ್ಲಿ ಕೆಲವು ಮತಗಟ್ಟೆಗಳಲ್ಲಿ ಗುಂಡಿನ ದಾಳಿ, ಬೆದರಿಕೆ, ಇವಿಎಂಗಳನ್ನು ನಾಶಪಡಿಸಿದ ಘಟನೆಗಳು ನಡೆದಿದೆ. ಬೂತ್ ವಶಪಡಿಸಿಕೊಂಡ ಆರೋಪಗಳು ಕೂಡಾ ಕೇಳಿ ಬಂದಿದೆ. ಶುಕ್ರವಾರದಂದು ಎರಡು ಲೋಕಸಭಾ ಕ್ಷೇತ್ರಗಳಾದ ಒಳ ಮಣಿಪುರ ಮತ್ತು ಹೊರ ಮಣಿಪುರದಲ್ಲಿ ಶೇಕಡಾ 68ಕ್ಕಿಂತ ಹೆಚ್ಚು ಮತದಾನವಾಗಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಕೆ.ಮೇಘಚಂದ್ರ, “ಮಣಿಪುರದ ಒಳ ಕ್ಷೇತ್ರದ 36 ಮತಗಟ್ಟೆಗಳಲ್ಲಿ ಮತ್ತು ಹೊರ ಮಣಿಪುರ ಕ್ಷೇತ್ರದಲ್ಲಿ 11 ಮತಗಟ್ಟೆಗಳಲ್ಲಿ ಮರು ಮತದಾನ ನಡೆಸುವಂತೆ ಒತ್ತಾಯಿಸಿ ಮಣಿಪುರ ಮುಖ್ಯ ಚುನಾವಣಾಧಿಕಾರಿಗೆ ಪಕ್ಷವು ದೂರು ನೀಡಿದೆ” ಎಂದು ತಿಳಿಸಿದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ