3:36 PM Wednesday 15 - October 2025

ಕಾಂಗ್ರೆಸ್ ಗೆ ಸೇರ್ಪಡೆಗೊಂಡ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ಎಸ್.ದ್ವಾರಕಾನಾಥ್

c s dwaraknath
20/08/2021

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ, ವಕೀಲ ಡಾ.ಸಿ.ಎಸ್. ದ್ವಾರಕಾನಾಥ್ ಅವರು ಶುಕ್ರವಾರ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದು, ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ, ರಾಜೀವ್ ಗಾಂಧಿ ಮತ್ತು ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನಾಚರಣೆ ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅವರು ಸೇರ್ಪಡೆಗೊಂಡರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಬಾವುಟ ನೀಡುವ ದ್ವಾರಕಾನಾಥ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಕೆ.ಎಚ್. ಮುನಿಯಪ್ಪ, ಕೆ. ರೆಹಮಾನ್ ಖಾನ್, ರಾಜ್ಯಸಭಾ ಸದಸ್ಯ ಡಾ.ಎಲ್. ಹನುಮಂತಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮ್ಮದ್, ರಾಮಲಿಂಗಾ ರೆಡ್ಡಿ, ಶಾಸಕ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ನಾರಾಯಣ ಸ್ವಾಮಿ, ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಪುಷ್ಪಾ ಅಮರನಾಥ್, ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಎಂ.ಡಿ. ಲಕ್ಷ್ಮೀನಾರಾಯಣ ಉಪಸ್ಥಿತರಿದ್ದರು.

ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಹುಜನ ಸಮಾಜ ಪಾರ್ಟಿಯಿಂದ ಸ್ಪರ್ಧಿಸಿದ್ದ ಸಿ.ಎಸ್.ದ್ವಾರಕಾನಾಥ್ ಅವರು ಹೀನಾಯವಾಗಿ ಸೋಲನುಭವಿಸಿದ್ದರು. ಬಳಿಕ ನಡೆದ ರಾಜಕೀಯ ವಿದ್ಯಮಾನಗಳಲ್ಲಿ ಅವರು ಯಾವುದೇ ರಾಜಕೀಯ ಚಟುವಟಿಕೆಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಅವರು ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳ ಮತಗಳನ್ನು ಸೆಳೆಯುವ ಉದ್ದೇಶದಿಂದ ಕಾಂಗ್ರೆಸ್ ಈ ತಂತ್ರವನ್ನು ಅನುಸರಿಸಿದೆ ಎನ್ನುವ ಅಭಿಪ್ರಾಯ ಸದ್ಯ ಕೇಳಿ ಬಂದಿದೆ.

ಇನ್ನಷ್ಟು ಸುದ್ದಿಗಳು…

ಗುಂಪುಗೂಡಬಾರದು ಎನ್ನುತ್ತಲೇ ಬಿಜೆಪಿ ಜನಾಶೀರ್ವಾದ ಜಾತ್ರೆಯ ಬಗ್ಗೆ ಮೌನ ವಹಿಸಿದ ಸಿಎಂ ಬೊಮ್ಮಾಯಿ

ಓವೈಸಿಯನ್ನು ಅಫ್ಘಾನಿಸ್ತಾನಕ್ಕೆ ಕಳುಹಿಸುವುದು ಉತ್ತಮ | ಸಚಿವೆ ಶೋಭಾ ಕರಂದ್ಲಾಜೆ

ಕೊವಿಡ್ ಲಸಿಕೆ ಪಡೆದು 20 ದಿನಗಳಲ್ಲಿ ಈ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷಿಸದಿರಿ!

ನರ್ಸ್ ನ ನಗ್ನ ಚಿತ್ರ ತೆಗೆದು ಲೈಂಗಿಕ ಕ್ರಿಯೆ ನಡೆಸಲು ಬ್ಲ್ಯಾಕ್ ಮೇಲ್ | ವೈದ್ಯನ ವಿರುದ್ಧ ದೂರು

ನರ್ಸ್ ನ ನಗ್ನ ಚಿತ್ರ ತೆಗೆದು ಲೈಂಗಿಕ ಕ್ರಿಯೆ ನಡೆಸಲು ಬ್ಲ್ಯಾಕ್ ಮೇಲ್ | ವೈದ್ಯನ ವಿರುದ್ಧ ದೂರು

ವಿಮಾನದಿಂದ ಬಿದ್ದ ಅಫ್ಘಾನ್ ನ ಇಬ್ಬರು ನಾಗರಿಕರ ಸಾವು ಎಷ್ಟೊಂದು ಭೀಕರವಾಗಿತ್ತು ಗೊತ್ತೆ? | ಸಾವನ್ನು ಕಣ್ಣಾರೆ ಕಂಡವರು ಹೇಳಿದ್ದೇನು?

ಇತ್ತೀಚಿನ ಸುದ್ದಿ

Exit mobile version