2028ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 141 ಸೀಟು ಖಚಿತ: ಡಿ.ಕೆ. ಶಿವಕುಮಾರ್ ಭವಿಷ್ಯ
ಹಾವೇರಿ: ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಭರ್ಜರಿ ಜಯಭೇರಿ ಬಾರಿಸಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹಾವೇರಿಯಲ್ಲಿ ಕಾಂಗ್ರೆಸ್ ಸರ್ಕಾರವು ಹಮ್ಮಿಕೊಂಡಿರುವ ‘ಸಾಧನಾ ಸಮಾವೇಶ’ದಲ್ಲಿ ಮಾತನಾಡಿದ ಅವರು, ಮುಂಬರುವ 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಒಟ್ಟು 141 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಡಿ.ಕೆ. ಶಿವಕುಮಾರ್ ಭವಿಷ್ಯ ನುಡಿದರು.
ಗ್ಯಾರಂಟಿ ಯೋಜನೆಗಳ ಪ್ರಭಾವ: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ ತಲುಪುತ್ತಿದ್ದು, ಈ ಜನಪರ ಕೆಲಸಗಳೇ ಪಕ್ಷಕ್ಕೆ ಶ್ರೀರಕ್ಷೆಯಾಗಲಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೇ ಪಕ್ಷದ ಸಂಘಟನೆ ಮತ್ತು ಸರ್ಕಾರದ ಸಾಧನೆಗಳನ್ನು ಮನೆಮನೆಗೆ ತಲುಪಿಸುವಂತೆ ಕಾರ್ಯಕರ್ತರಿಗೆ ಇದೇ ಸಂದರ್ಭದಲ್ಲಿ ಅವರು ಕರೆ ನೀಡಿದರು.
1 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ:
ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ 1000 ದಿನಗಳನ್ನು ಪೂರೈಸಿರುವುದರ ಪ್ರಯುಕ್ತ ಹಾವೇರಿಯಲ್ಲಿ ಕಂದಾಯ ಇಲಾಖೆ ಮತ್ತು ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ಭೂಗ್ಯಾರಂಟಿ ಸಮರ್ಪಣಾ ಸಮಾವೇಶದಲ್ಲಿ 1 ಲಕ್ಷ ಕುಟುಂಬಗಳಿಗೆ ಸರ್ಕಾರದ ವತಿಯಿಂದ ಹಕ್ಕುಪತ್ರ ವಿತರಿಸಲಾಯಿತು. ಇದು ಭೂಮಿ ಎಂಬ ಬದುಕಿನ ಆಧಾರವನ್ನು ಜನರ ಕೈಗೆ ಕಾನೂನುಬದ್ಧವಾಗಿ ಒಪ್ಪಿಸುವ ಮಹತ್ವದ ಹೆಜ್ಜೆಯಾಗಿದೆ. ಹೀಗಾಗಿ 1 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಿ ಅವರ ಕನಸುಗಳಿಗೆ ಭದ್ರ ನೆಲೆ ಕಲ್ಪಿಸಲಾಯಿತು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD
























