ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

nanjesh
27/07/2025

ಬೆಂಗಳೂರು: ಕಾಂಗ್ರೆಸ್ ಮುಖಂಡರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ  ಜಿಲ್ಲೆಯ ಬೆಂಗಳೂರು ದಕ್ಷಿಣ(ರಾಮನಗರ) ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಗ್ರಾಮದ ಡಾಬಾವೊಂದರ ಬಳಿ ನಡೆದಿದೆ.

ಜಮೀನು ವಿವಾದ ಹಿನ್ನೆಲೆಯಲ್ಲಿ ನಾಲ್ಕೈದು ಜನರ ತಂಡ, ಡಾಬಾವೊಂದರಲ್ಲಿ ಪಾರ್ಟಿ ಮಾಡುತ್ತಿದ್ದ ನಂಜೇಶ್(45) ಎನ್ನುವರ ಮೇಲೆ ದಾಳಿ ಮಾಡಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ.

ಹೊಂಗಾಣಿದೊಡ್ಡಿ ಗ್ರಾಮದ ನಿವಾಸಿಯಾಗಿದ್ದ ನಂಜೇಶ್, ಕೆಲವು ದಿನಗಳ ಹಿಂದೆಯೇ ತನ್ನ ಗ್ರಾಮದಲ್ಲಿನ ಜಮೀನಿನ ಸೈಟ್ ವಿವಾದಕ್ಕೆ ಸಂಬಂಧಪಟ್ಟಂತೆ ಸ್ಥಳೀಯರೊಂದಿಗೆ ಮಾತಿನ ಚಕಮಕಿ ಮಾಡಿಕೊಂಡಿದ್ದ. ಈ ಸಂಬಂಧ ಒಂದು ಸುತ್ತಿನ ಜಗಳವೂ ನಡೆದಿತ್ತು. ಈ ಹಿನ್ನೆಲೆಯೇ ಹಳೆಯ ಘಟನೆಯ ಬಗ್ಗೆ ದ್ವೇಷವನ್ನು ಸಾಧಿಸುತ್ತಿದ್ದ ವಿರೋಧಿಗಳು ಕಾಂಗ್ರೆಸ್ ಮುಖಂಡ ನಂಜೇಶ್‌ನನ್ನು ಕೊಲೆ ಮಾಡುವುದಕ್ಕೆ ಸುಪಾರಿ ಕೊಟ್ಟಿದ್ದಾರೆ ಎಂದು ಶಂಕಿಸಲಾಗಿದೆ.

ಹಲ್ಲೆಗೊಳಗಾದ ನಂಜೇಶ್ ಅವರನ್ನು ತಕ್ಷಣವೇ ಕನಕಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಘಟನೆಯ ಬಳಿಕ ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version