10:09 PM Saturday 23 - August 2025

ಉಡುಪಿ ನಗರಸಭೆ ಸದಸ್ಯೆ, ಕಾಂಗ್ರೆಸ್ ಮುಖಂಡೆ ಸೆಲಿನಾ ಕರ್ಕಡ ನಿಧನ

celina
30/10/2022

ಕಾಂಗ್ರೆಸ್ ಮುಖಂಡೆ, ಉಡುಪಿ ನಗರಸಭೆ ಪೆರಂಪಳ್ಳಿ ವಾರ್ಡಿನ ಸದಸ್ಯೆ ಸೆಲಿನಾ ಕರ್ಕಡ(52) ಅಲ್ಪಕಾಲದ ಅಸೌಖ್ಯದಿಂದ ಶನಿವಾರ ರಾತ್ರಿ  ನಿಧನರಾದರು.

ಕರುಳಿನ ಕ್ಯಾನ್ಸರ್ ಹಾಗೂ ಮಧುಮೇಹದಿಂದ ಬಳಲುತ್ತಿದ್ದ ಇವರು ಕೆಲವು ದಿನಗಳ ಹಿಂದೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಶನಿವಾರ ರಾತ್ರಿ ಹನ್ನೊಂದು ಮೂವತ್ತು ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು ಎಂದು ತಿಳಿದುಬಂದಿದೆ.

ಇವರು ಎರಡನೇ ಅವಧಿಗೆ ಕಾಂಗ್ರೆಸ್ ಪಕ್ಷ ದಿಂದ ನಗರಸಭೆ ಸದಸ್ಯೆಯಾಗಿ ಆಯ್ಕೆ ಯಾಗಿದ್ದರು.  ಮೃತರು ಪತಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ ಇವರ ನಿಧನಕ್ಕೆ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆ ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version