ಕಾಂಗ್ರೆಸ್ ಅವನತಿ ಆರಂಭ: ಸಂಸದ ಪ್ರತಾಪ್ ಸಿಂಹ - Mahanayaka

ಕಾಂಗ್ರೆಸ್ ಅವನತಿ ಆರಂಭ: ಸಂಸದ ಪ್ರತಾಪ್ ಸಿಂಹ

prathap simha
11/03/2022


Provided by

ಮೈಸೂರು: ಮುಂದೆ ಬಿಜೆಪಿ ಪೂರ್ಣ ಪ್ರಮಾಣದ ಅಧಿಕಾರ ಹಿಡಿಯುತ್ತದೆ. ಕಾಂಗ್ರೆಸ್ ಅವನತಿ ಆರಂಭವಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆಮಿಫೈನಲ್​ನಲ್ಲಿ ಭರ್ಜರಿ ಗೆಲುವು ಸಾಧಿಸಿದ್ದೇವೆ. ಫೈನಲ್ 2024ರ ಲೋಕಸಭಾ ಚುನಾವಣೆಯನ್ನು ಗೆಲ್ಲುತ್ತೇವೆ. ಮಧ್ಯದಲ್ಲಿ ಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲೂ ಕೂಡಾ ಜಯಭೇರಿ ಬಾರಿಸುತ್ತೇವೆ‌. ಜನ ಮತ್ತೊಮ್ಮೆ ಬಿಜೆಪಿ ಬಯಸಿದ್ದಾರೆ ಎಂದರು.

ಮುಂದೆ ಬಿಜೆಪಿ ಪೂರ್ಣ ಪ್ರಮಾಣದ ಅಧಿಕಾರ ಹಿಡಿಯುತ್ತದೆ. ಕಾಂಗ್ರೆಸ್ ಅವನತಿ ಆರಂಭವಾಗಿದೆ. ಪ್ರಿಯಾಂಕಾ ಗಾಂಧಿಯನ್ನು ಇಂದಿರಾಗಾಂಧಿಗೆ ಹೋಲಿಕೆ ಮಾಡಿ ಮೂರು ಬಾರಿ ಪ್ರಚಾರ ಮಾಡಿದ್ದರು. ಆದರೂ ಏನೂ ಉಪಯೋಗ ಆಗಿಲ್ಲ. ಕಾಂಗ್ರೆಸ್ ಲೀಡ್ ಮಾಡುವವರು ಯಾರು ಇಲ್ಲ ಎಂದು ಅವರು ಹೇಳಿದರು.

ಕರ್ನಾಟಕದ ಮೇಲೂ ಕಾಂಗ್ರೆಸ್ ಆಸೆ ಇಟ್ಟುಕೊಂಡಿದೆ. ಆದರೆ ಪರಿಸ್ಥಿತಿ ಅವರಿಗೆ ವಿರುದ್ಧವಾಗಿದೆ. ಗಾಂಧಿ ಫ್ಯಾಮಿಲಿ ಬಿಟ್ಟು ಹೊರಬರುವವರೆಗೂ ಕಾಂಗ್ರೆಸ್ ಉದ್ಧಾರ ಆಗಲ್ಲ. ಕಾಂಗ್ರೆಸ್ ಹೊಸ ನಾಯಕತ್ವದ ಹುಡುಕಾಟದಲ್ಲಿದೆ ಎಂದು ಕಾಂಗ್ರೆಸ್​ ವಿರುದ್ಧ ಸಂಸದ ಪ್ರತಾಪ್ ಸಿಂಹ ಲೇವಡಿ ಮಾಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರಾಜೀವ್ ಹಂತಕ ಜಾಮೀನಿನಲ್ಲಿ ಬಿಡುಗಡೆಯಾಗುತ್ತಿದ್ದಂತೆಯೇ ಮದುವೆಗೆ ಸಿದ್ಧತೆ!

ದೇಶದ 2ನೇ ಅತೀ ದೊಡ್ಡ ಶ್ರೀಮಂತ ಪಕ್ಷ ಬಿಎಸ್ ಪಿಗೆ ಹೀನಾಯ ಸೋಲು | ಮಾಯಾವತಿಜಿ ಇದು ನ್ಯಾಯವೇ?

ಪೊಲೀಸರ ಮೇಲೆ ಹೆಜ್ಜೇನು ದಾಳಿ: ಇಬ್ಬರು ಗಂಭೀರ

ಪಂಚರಾಜ್ಯ ಚುನಾವಣೆ: ರಾಜ್ಯದ ಮೇಲೆ ಪರಿಣಾಮ ಬೀರಲ್ಲ; ಸಚಿವ ವಿ.ಸೋಮಣ್ಣ

ಪಂಜಾಬ್‌‌ ನಲ್ಲಿ ಆಮ್ ಆದ್ಮಿಗೆ ಮುನ್ನಡೆ; ನವಜೋತ್ ಸಿಂಗ್ ಸಿಧು ಎರಡನೇ ಸ್ಥಾನಕ್ಕೆ

ಇತ್ತೀಚಿನ ಸುದ್ದಿ