ಚುನಾವಣೆಯಲ್ಲಿ ಸೋತ ಆಘಾತದಿಂದ ಕಾಂಗ್ರೆಸ್ ನಾಯಕ ಹೃದಯಾಘಾತದಿಂದ ಸಾವು

congress
18/07/2022

ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಿಂದ ಸೋತಿದ್ದಕ್ಕೆ ಖಿನ್ನತೆಗೊಳಗಾದ ಕಾಂಗ್ರೆಸ್ ನಾಯಕ ಹೃದಯಾಘಾತದಿಂದ ಮೃತಪಟ್ಟ ಘಟನೆ  ಮಧ್ಯಪ್ರದೇಶದಲ್ಲಿ ನಡೆದಿದೆ.

ಮಧ್ಯ ಪ್ರದೇಶದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ರೇವಾದ ಹನುಮಾನ ಪ್ರದೇಶದ ವಾರ್ಡ್ 9ರಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಮುಖಂಡ ಹರಿನಾರಾಯಣ ಗುಪ್ತ ಮೃತಪಟ್ಟವರು ಎಂದು ಗುರುತಿಸಲಾಗಿದೆ.

ತಮ್ಮ ಪ್ರತಿಸ್ಪರ್ಧಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅಖಿಲೇಶ್ ಗುಪ್ತಾ ವಿರುದ್ಧ ಕೇವಲ 14 ಮತಗಳ ಅಂತರದಿಂದ  ಸೋಲನುಭವಿಸಿದ್ದರು. ಇದರಿಂದ ಖಿನ್ನತೆಗೊಳಗಾದ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು,  ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version