ಕಾಂಗ್ರೆಸ್ ನಿಂದ ಮುಸ್ಲಿಮರಿಗೆ ನ್ಯಾಯ ಸಿಗುವುದಿಲ್ಲ | ಸಿಎಂ ಇಬ್ರಾಹಿಂ ಹೇಳಿಕೆ - Mahanayaka

ಕಾಂಗ್ರೆಸ್ ನಿಂದ ಮುಸ್ಲಿಮರಿಗೆ ನ್ಯಾಯ ಸಿಗುವುದಿಲ್ಲ | ಸಿಎಂ ಇಬ್ರಾಹಿಂ ಹೇಳಿಕೆ

01/02/2021

ರಾಯಚೂರು: ಕಾಂಗ್ರೆಸ್ ನಲ್ಲಿ ಮುಸ್ಲಿಮರಿಗೆ ನ್ಯಾಯ ಸಿಗುವುದಿಲ್ಲ. ಯಾಕೆಂದರೆ, ಕಾಂಗ್ರೆಸ್ ನಲ್ಲಿ ಅಲ್ಪಸಂಖ್ಯಾತ ನಾಯಕರನ್ನು ಬೆಳೆಸಿಲ್ಲ ಎಂದು ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.

ಭಾನುವಾರ ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಗೆ ಅಲ್ಪಸಂಖ್ಯಾತರ ಮತಗಳು ಮಾತ್ರ ಬೇಕು. ಆದರೆ ಪಕ್ಷದಲ್ಲಿ ಮುಸ್ಲಿಮರಿಗೆ ನ್ಯಾಯ ಒದಗಿಸಲಾಗಿಲ್ಲ.  ಕಾಂಗ್ರೆಸ್ ಪಕ್ಷದಲ್ಲಿ ಕನಿಷ್ಠ ಪಕ್ಷ, ಅಲ್ಪಸಂಖ್ಯಾತರನ್ನು ಸಭಾಧ್ಯಕ್ಷ ಸ್ಥಾನದಲ್ಲಿ ಕೂಡ ಕೂರಿಸಿಲ್ಲ ಎಂದು ಅವರು ಹೇಳಿದರು.

ನಾನು ಕಾಂಗ್ರೆಸ್ ನಿಂದ ದೂರವಾಗಿಲ್ಲ, ಜೆಡಿಎಸ್ ಗೂ ಸೇರ್ಪಡೆಯಾಗಿಲ್ಲ. ಆದರೆ ಎಲ್ಲರ ಅಭಿಪ್ರಾಯಗಳನ್ನು ಸಂಗ್ರಹಿಸಿ ಮಾರ್ಚ್ ನಲ್ಲಿ ನಿರ್ಧರಿಸುತ್ತೇನೆ. ನಾನು ಒಂದೇ ಸಮಾಜದೊಂದಿಗೆ ಪಕ್ಷ ಸಂಘಟನೆ ಮಾಡುವುದಿಲ್ಲ. ಎಲ್ಲ ಸಮಾಜಗಳನ್ನೂ ಒಗ್ಗೂಡಿಸಿ ಪಕ್ಷ ನಡೆಸುವ ಉದ್ದೇಶ ಹೊಂದಿದ್ದೇನೆ ಎಂದು ಸಿಎಂ ಇಬ್ರಾಹಿಂ ಹೇಳಿದರು.

ಇತ್ತೀಚಿನ ಸುದ್ದಿ