ರಾಹುಲ್ ಗಾಂಧಿ ಹುಟ್ಟು ಹಬ್ಬದ ಪ್ರಯುಕ್ತ ಕೊವಿಡ್ ಸೆಂಟರ್ ನಲ್ಲಿ ಪೌಷ್ಠಿಕ ಆಹಾರ ವಿತರಣೆ
ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ರವರ ಹುಟ್ಟು ಹಬ್ಬದ ಪ್ರಯುಕ್ತ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಹಾಗೂ ಶಿಡ್ಲಘಟ್ಟ ತಾಲ್ಲೂಕು ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಅವರಿಗೆ ಪೌಷ್ಠಿಕ ಅಂಶವಿರುವ ಡ್ರೈಫ್ರೂಟ್ ಪದಾರ್ಥಗಳನ್ನು ವಿತರಿಸಿದರು.
ರಾಜ್ಯ ಸರ್ಕಾರ ಕೊರೋನಾ ಸೋಂಕು ತಡೆಯುವುದರಲ್ಲಿ ಹಾಗೂ ರೋಗಿಗಳಿಗೆ ಔಷಧಿ ಮತ್ತಿತರ ಔಷಧೋಪಚಾರ ನೀಡುವುದರಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕಾಂಗ್ರೆಸ್ ಉಸ್ತುವಾರಿಯಾದ ಕೆ.ಚೇತನ್ ಅವರು ಆರೋಪಿಸಿದರು
ರಾಜ್ಯದಲ್ಲಿ ಕೊರೊನಾ ದಿನೇದಿ ನೆ ಹೆಚ್ಚಾಗುತ್ತಿದ್ದರೂ ಅದನ್ನು ತಡೆಯುವುದರಲ್ಲಿ ಬಿಜೆಪಿ ಸರ್ಕಾರ ವೈಜ್ಞಾನಿಕ ರೀತಿಯಲ್ಲಿ ಹಾಗೂ ವ್ಯವಸ್ಥಿತ ದೂರದೃಷ್ಟಿ ಇಲ್ಲದಂತೆ ವರ್ತಿಸುತ್ತಿದೆ ಜನಸಾಮಾನ್ಯರ ಸಂಕಷ್ಟಗಳನ್ನು ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ ಎಂದು ಬಿಜೆಪಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಿಡಿಕಾರಿದರು.
ಚಿಕ್ಕಳ್ಳಾಪುರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಮುದಾಸಿರ್ ದಾವೂದ್ , ಶಿಡ್ಲಘಟ್ಟ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾದ ಚರಣ್, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾದ ವಿಜಯ್ ಶಿಡ್ಲಘಟ್ಟ , ಎಸ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮುತ್ತೂರು ವೆಂಕಟೇಶ್ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಹಮೀಮ್ ಹಾಗೂ ಶಿಡ್ಲಘಟ್ಟ ನಗರಸಭೆ ಸದಸ್ಯರು ಹಾಗೂ ಯುವ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

























