ಕಾಂಗ್ರೆಸ್ ಪ.ಜಾತಿ ರಾಷ್ಟ್ರೀಯ ಅಧ್ಯಕ್ಷ ರಾಜೇಶ್ ಲಿಲೋತಿ ಅವರಿಗೆ ಮಂಗಳೂರಿನಲ್ಲಿ ಸ್ವಾಗತ

mangalore
19/05/2025

ಮಂಗಳೂರು:  ಅಖಿಲ ಭಾರತ ರಾಷ್ಟ್ತ್ರೀಯ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷರಾದ ರಾಜೇಶ್ ಲಿಲೋತಿಯರವರನ್ನು ಭಾನುವಾರ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷರಾದ ದಿನೇಶ್ ಮೂಳೂರು ಭೇಟಿಯಾಗಿ ಸ್ವಾಗತ ಕೋರಿದರು.

ಈ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಣೇಶ್ ಮೂಡಬಿದ್ರಿ,   ಪದಾಧಿಕಾರಿಗಳಾದ ರವಿ ಸುಂಕದ ಕಟ್ಟೆ, ಅಭಿಷೇಕ್ ಪಿ.ಎಸ್., ಗುರುಪ್ರಸಾದ್ ಮೂಳೂರು, ಪ್ರವೀಣ್ ಮಂಗಳೂರು ಹಾಗೂ ಕಮಲಾಕ್ಷ ಬಜಾಲ್ ಉಪಸ್ಥಿತರಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version