ಸುಳ್ಳಿನ ಸುಳಿಯಲ್ಲಿ ಕಾಂಗ್ರೆಸ್ ಪಕ್ಷ:  ಸಿಎಂ ಬಸವರಾಜ ಬೊಮ್ಮಾಯಿ - Mahanayaka
2:15 AM Wednesday 15 - October 2025

ಸುಳ್ಳಿನ ಸುಳಿಯಲ್ಲಿ ಕಾಂಗ್ರೆಸ್ ಪಕ್ಷ:  ಸಿಎಂ ಬಸವರಾಜ ಬೊಮ್ಮಾಯಿ

cm bommai
22/02/2023

ಹಾಸನ: ಕಾಂಗ್ರೆಸ್ ನವರ ಬೂಟಾಟಿಕೆಯ ಮಾತು, ಸುಳ್ಳು ಹೇಳುವ ಚಾಳಿಯಿಂದ ಸುಳ್ಳಿನ ಸುಳಿಯಲ್ಲಿ ಸಿಲುಕಿದ್ದಾರೆ. ತಮ್ಮ ಕಾಲದ ಭ್ರಷ್ಟಾಚಾರಗಳನ್ನು. ಜಾತಿಗಳನ್ನು ಒಡೆಯುವ ಕೆಲಸವನ್ನು ಮಾಡಿದ್ದಾರೆ. ಭ್ರಷ್ಟ ಕಾಂಗ್ರೆಸ್ ನ್ನು ಶಾಶ್ವತವಾಗಿ ಜನರು ಮನೆಗೆ ಕಳಿಸಲಿದ್ದಾರೆ  ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.


Provided by

ಹಾಸನ ಜಿಲ್ಲೆಯ ಬೇಲೂರಿನಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಸಾರ್ವಜನಿಕ ಕಾರ್ಯಕ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರೊಂದಿಗೆ ಭಾಗವಹಿಸಿ ಮಾತನಾಡಿದರು.

ಹಾಸನ ಬಹಳ ವರ್ಷಗಳಿಂದ ಒಂದೇ ಪಕ್ಷದ ಹಿಡಿತದಲ್ಲಿದ್ದು, ಯಾವುದೇ ಅಭಿವೃದ್ಧಿಯಾಗುತ್ತಿಲ್ಲ. 3 ವರ್ಷಗಳಿಂದ ಭಾಜಪ ಸರ್ಕಾರದ ಆಡಳಿತವನ್ನು ಜನರು ನೋಡಿದ್ದಾರೆ. ಹಲವು ವರ್ಷಗಳ ಸಮಸ್ಯೆಗಳನ್ನು ಕಗ್ಗಂಟಾಗಿಸಿ, ರಾಜ್ಯದ ಪ್ರಗತಿಯನ್ನು ಕುಂಠಿತಗೊಳಿಸಲಾಗಿತ್ತು. ಈ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಕಮಲ ಅರಳಿಸಬೇಕಿದೆ. ಭಾರತೀಯ ಜನತಾ ಪಕ್ಷ ರಾಜ್ಯದಲ್ಲಿ ಆಡಳಿತದ ಚುಕ್ಕಾಣಿಣ ಹಿಡಲಿರುವ ವಿಶ್ವಾಸ ನಮಗಿದೆ ಎಂದರು.

ಭಾಜಪ- ವಿಶ್ವದ ಅತಿ ದೊಡ್ಡ ಪಕ್ಷ :

ನಮ್ಮ ಸರ್ಕಾರ ಸಾವಿರಾರು ಕೋಟಿ ರೂ.ಗಳ ಅನುದಾನವನ್ನು ನೀಡಿ, ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿಯನ್ನು ಪ್ರಗತಿಯಲ್ಲಿರಿಸಲಾಗಿದೆ. ಭಾಜಪ ಪಕ್ಷ , ಬೂತ್ ಮಟ್ಟದಿಂದ ಹಿಡಿದು ರಾಷ್ಟ್ರಮಟ್ಟದವರೆಗೆ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷ. ವಿಶ್ವದಲ್ಲಿರುವ ಅತಿ ದೊಡ್ಡ ಪಕ್ಷ, ದೊಡ್ಡ ಸಂಘಟಿತ ಪಕ್ಷವಾಗಿದೆ. ರಾಷ್ಟ್ರ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ, ಪಕ್ಷದ ಧ್ಯೇಯಗಳನ್ನು ಪ್ರತಿಪಾದಿಸಿ, ದೇಶದಲ್ಲಿ ಸದೃಢವಾದಂತಹ ರಾಜಕೀಯ ವಾತಾವರಣವನ್ನು ಮೂಡಿಸಲು ಭಾಜಪ ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾ ಅವರು ಮಹತ್ವದ ಪಾತ್ರ ವಹಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಸಿಂಗ್, ಸಿ.ಟಿ.ರವಿ, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಸಚಿವರಾದ ಗೋಪಾಲಯ್ಯ ಮತ್ತಿತರರು ಹಾಜರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ