ಇಂಡಿಯಾ ಕೂಟ ಅಧಿಕಾರಕ್ಕೆ ಬಂದರೆ ಬಡವರಿಗೆ 10 ಕೆಜಿ ಉಚಿತ ರೇಷನ್: ಮಲ್ಲಿಕಾರ್ಜುನ ಖರ್ಗೆ ಘೋಷಣೆ

ಇಂಡಿಯಾ ಕೂಟ ಅಧಿಕಾರಕ್ಕೆ ಬಂದರೆ ಬಡವರಿಗೆ 10 ಕೆಜಿ ಉಚಿತ ಪಡಿತರ ನೀಡುವುದಾಗಿ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಜೊತೆ ಉತ್ತರಪ್ರದೇಶದಲ್ಲಿ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಈ ಭರವಸೆ ನೀಡಿದ್ದಾರೆ.
ಮೋದಿ ಸರ್ಕಾರ 5 ಕೆ.ಜಿ ಪಡಿತರವನ್ನು ನೀಡುತ್ತಿದೆ. ಆದರೆ ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ರಚನೆಯಾದರೆ ನಾವು ಅದನ್ನು ಬಡವರಿಗೆ 10 ಕೆಜಿ ಪಡಿತರವಾಗಿ ಮಾರ್ಪಡಿಸುತ್ತೇವೆ ಎಂದು ಖರ್ಗೆ ಭರವಸೆ ನೀಡಿದ್ದಾರೆ.
ಅಲ್ಲದೇ ಕರ್ನಾಟಕ ತೆಲಂಗಾಣದಲ್ಲಿ ನಾವಿದನ್ನು ಈಗಾಗಲೇ ಜಾರಿ ಮಾಡಿದ್ದೇವೆ ಎಂದು ಕೂಡ ಖರ್ಗೆ ಉಲ್ಲೇಖಿಸಿದ್ದಾರೆ. ಆಹಾರ ಭದ್ರತಾ ಕಾಯ್ದೆಯನ್ನು ಕಾಂಗ್ರೆಸ್ ಜಾರಿಗೆ ತಂದಿತು, ಬಡವರಿಗಾಗಿ ನೀವು ಏನನ್ನೂ ಮಾಡಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth