8:19 PM Thursday 11 - September 2025

‘ಕೈ’ ಪಂಚ್: ಕಾಂಗ್ರೆಸ್‌ ನಿಂದ ಪ್ರಧಾನಿಗೆ ಕೇಳಿದ 100 ಪ್ರಶ್ನೆಗಳ ಪುಸ್ತಕ ಬಿಡುಗಡೆ

congress
01/06/2023

ಅದಾನಿ ಕೇಸ್ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಕೇಳಿದ 100 ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಇಂದು ದಿಲ್ಲಿಯಲ್ಲಿ ಪುಸ್ತಕವನ್ನು ಬಿಡುಗಡೆಗೊಳಿಸಿದೆ.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಈ ಪುಸ್ತಕ ಬಿಡುಗಡೆ ಮಾಡಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಈ ಹಿಂದೆಯೂ ಸಂಸತ್ತಿನಲ್ಲಿ ಅದಾನಿ ಪ್ರಕರಣದಲ್ಲಿ ಜಂಟಿ ಸಂಸದೀಯ ಸಮಿತಿ ಅಂದರೆ ಜೆಪಿಸಿ ತನಿಖೆಗೆ ನಾವು ಒತ್ತಾಯಿಸಿದ್ದೇವೆ. ಈಗ ಹೊಸ ಸಂಸತ್ತಿನ ಮುಂಗಾರು ಅಧಿವೇಶನದಲ್ಲೂ ಜೆಪಿಸಿ ತನಿಖೆಗೆ ಒತ್ತಾಯಿಸಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಜೂನ್ 12ರಂದು ನಡೆಯಲಿರುವ ವಿರೋಧ ಪಕ್ಷಗಳ ಸಭೆಯಲ್ಲಿ ನಾವು ಭಾಗವಹಿಸಲಿದ್ದೇವೆ. ಆದರೆ ಕಾಂಗ್ರೆಸ್‌ನಿಂದ ಯಾರೆಲ್ಲ ಪಾಲ್ಗೊಳ್ಳಲಿದ್ದಾರೆ ಎಂಬುದು ಇನ್ನಷ್ಟೇ ನಿರ್ಧಾರವಾಗಬೇಕಿದೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version