ಕಾಂಗ್ರೆಸ್ –ಎಸ್ ಡಿಪಿಐ ಒಂದು ನಾಣ್ಯದ ಎರಡು ಮುಖಗಳು | ನಳಿನ್ ಕುಮಾರ್ ಕಟೀಲ್

08/11/2020

ಬಂಟ್ವಾಳ:  ಕಾಂಗ್ರೆಸ್ ಹಾಗೂ ಎಸ್ ಡಿಪಿಐ ಒಂದೇ ನಾಣ್ಯದ ಎರಡು ಮುಖ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದು, ಬಂಟ್ವಾಳ ಪುರಸಭಾ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಬಿಜೆಪಿಯ ಕೈತಪ್ಪಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಕಾಂಗ್ರೆಸ್ ಹಾಗೂ ಎಸ್ ಡಿಪಿಐ ಪರಸ್ಪರ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಜನತೆಗೆ ಮಾತುಕೊಟ್ಟಿತ್ತು. ಆದರೆ, ಜನರಿಗೆ ಕೊಟ್ಟ ಮಾತನನ್ನು ಮುರಿದು ಅವರು ಅಧಿಕಾರಕ್ಕಾಗಿ ಮೈತ್ರಿ ಮಾಡಿಕೊಂಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷದ ಬಣ್ಣ ಬಯಲಾಗಿದೆ. ಆದರೂ ನೂತನ ಅಧ್ಯಕ್ಷ, ಉಪಾಧ್ಯಕ್ಷರು ಉತ್ತಮ ಆಡಳಿತ ನೀಡಲಿ,  ಶಾಸಕರು ಮತ್ತು ನಾನು ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಅವರು ಹೇಳಿದರು.

ಇನ್ನೂ ಬಂಟ್ವಾಳ ಪುರಸಭೆಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದಲ್ಲಿ ಕಾಂಗ್ರೆಸ್ –ಎಸ್ ಡಿಪಿಐ ಮೈತ್ರಿ ಮಾಡಿಕೊಂಡಿರುವ ವಿಚಾರವಾಗಿ ಮಾತನಾಡಿದ್ದ ಕಾಂಗ್ರೆಸ್ ನ ಮಾಜಿ ಸಚಿವ ರಮಾನಾಥ್ ರೈ, ಕಾಂಗ್ರೆಸ್ ಯಾರ ಜೊತೆಗೂ ಮೈತ್ರಿ ಮಾಡಿಕೊಂಡಿಲ್ಲ. ಜಾತ್ಯತೀತ ನಿಲುವುಗಳು ಜೊತೆ ಸೇರಿವೆ ಅಷ್ಟೇ ಎಂದು ಹೇಳಿದ್ದರು.

ಇತ್ತೀಚಿನ ಸುದ್ದಿ

Exit mobile version