ಕಾಂಗ್ರೆಸ್ ನವರು ರಾಜಕೀಯ ಬಿಟ್ಟು ಮೊದಲು ಸಿಎಂ ಆಯ್ಕೆ ಮಾಡಲಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ ನವರು ಲಿಂಗಾಯತರ ಬಗ್ಗೆ ಬಹಳ ಮಾತನಾಡಿದ್ದಾರೆ. ಈಗ ಲಿಂಗಾಯತ ನಾಯಕರಿಗೆ ಯಾವ ಸ್ಥಾನ ಕೊಡುತ್ತಾರೆ ನೋಡೊಣ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದ ಅವರು, ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಜನರ ಮತ್ತು ರಾಜ್ಯದ ಅಭಿವೃದ್ಧಿ ಮಾಡಲಿ. ಅವರಿಗೆ ಇಲ್ಲಿಯವರೆಗೂ ಮುಖ್ಯಮಂತ್ರಿ ಆಯ್ಕೆ ಮಾಡಲು ಅಗುತ್ತಿಲ್ಲ. ಬೇಗ ಮುಖ್ಯಮಂತ್ರಿ ಆಯ್ಕೆಯನ್ನು ಮಾಡಲಿ ಎಂದರು.
ಪೂರ್ಣ ಬಹುಮತ ಇದ್ದರೂ ಮುಖ್ಯಮಂತ್ರಿ ಆಯ್ಕೆ ನಿರ್ಧಾರ ಮಾಡದೇ ಇರುವುದು ಪಕ್ಷದಲ್ಲಿನ ಹೊಂದಾಣಿಕೆ ಸರಿ ಇಲ್ಲ ಎನ್ನುದನ್ನು ತೋರಿಸುತ್ತದೆ. ಅದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ತಮ್ಮ ರಾಜಕೀಯ ಬಿಟ್ಟು ಆದಷ್ಟು ಬೇಗ ಮುಖ್ಯಮಂತ್ರಿ ಆಯ್ಕೆ ಮಾಡಿ, ಸರ್ಕಾರ ರಚಿಸಿ ಜನರ ಸೇವೆ ಮಾಡಲಿ ಎಂದರು.
ಲಿಂಗಾಯತ ಸಮುದಾಯದ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕರು ಬಹಳ ಮಾತನಾಡಿದ್ದಾರೆ. ಅವರು ಲಿಂಗಾಯತ ನಾಯಕರಿಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ಯಾವ ಯಾವ ಹುದ್ದೆಗಳನ್ನು ಕೊಡುತ್ತಾರೆ ಕಾದು ನೋಡೋಣ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw