ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತರು ಬಿಜೆಪಿಗೆ ಸೇರ್ಪಡೆ - Mahanayaka
11:54 AM Saturday 23 - August 2025

ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತರು ಬಿಜೆಪಿಗೆ ಸೇರ್ಪಡೆ

udupi bjp
19/02/2023


Provided by

ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಕೆ.ರಘುಪತಿ ಭಟ್ ಅವರ ಕಾರ್ಯ ವೈಖರಿ, ಜನಪರ ಕಾಳಜಿ ಹಾಗೂ  ಕ್ಷೇತ್ರದಾದ್ಯಂತ ನಡೆದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.

ದಿ. ಚಂದ್ರಕಾಂತ್ ಶಣೈ ಅವರ ಮಗನಾದ ಅಭಯ್ ಶಣೈ ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತರಾದ ಸೂರ್ಯಕಾಂತ್ ಭಾರತೀಯ ಜನತಾ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾದರು.

ಶಾಸಕ ಕೆ. ರಘುಪತಿ ಭಟ್ ಅವರು ಭಾರತೀಯ ಜನತಾ ಪಕ್ಷದ ಬಾವುಟವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ನಗರ ಬಿಜೆಪಿ ಉಪಾಧ್ಯಕ್ಷರಾದ ವೆಂಕಟರಮಣ ಕಿದಿಯೂರು, ಜಿಲ್ಲಾ ಬಿಜೆಪಿ ಕೋಶಾಧಿಕಾರಿಗಳಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ಬಿಜೆಪಿ ಪ್ರಕೋಷ್ಠಗಳ ಸಂಯೋಜಕರಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ರಾಜೇಂದ್ರ ಪಂದುಬೆಟ್ಟು ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ