ಜುಲೈ 12ರಂದು ರಾಹುಲ್ ಗಾಂಧಿ ಬೆಂಬಲಿಸಿ ಮೌನ ಸತ್ಯಾಗ್ರಹ ನಡೆಸಲು ಕಾಂಗ್ರೆಸ್ ನಿರ್ಧಾರ

08/07/2023

ಮಾನನಷ್ಟ ಮೊಕದ್ದಮೆಯಲ್ಲಿ ತಪ್ಪಾಗಿ ಶಿಕ್ಷೆಗೊಳಗಾಗಿ ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಪಕ್ಷವು ಜುಲೈ 12 ರಂದು ಎಲ್ಲಾ ರಾಜ್ಯ ಪ್ರಧಾನ ಕಚೇರಿಗಳ ಮಹಾತ್ಮ ಗಾಂಧಿ ಪ್ರತಿಮೆಗಳ ಮುಂದೆ ಒಂದು ದಿನದ ಮೌನ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ ಎಂದು ಕಾಂಗ್ರೆಸ್ ಮುಖಂಡ ಕೆಸಿ ವೇಣುಗೋಪಾಲ್ ತಿಳಿಸಿದ್ದಾರೆ.
ಮೋದಿ ಉಪನಾಮ ಹೇಳಿಕೆಗೆ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ನೀಡಿರುವ ತೀರ್ಪನ್ನು ತಡೆಹಿಡಿಯುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿಸಿದೆ. ಈ ಹಿನ್ನೆಲೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಕಚೇರಿಗಳ ಮುಂದೆ ಒಂದು ದಿನದ ಮೌನ ಪ್ರತಿಭಟನೆ ನಡೆಸಲಾಗುತ್ತದೆ.
ಜುಲೈ 12, 2023 ರಂದು ಬುಧವಾರ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಎಲ್ಲಾ ರಾಜ್ಯ ಪ್ರಧಾನ ಕಛೇರಿಗಳಲ್ಲಿ ಎಲ್ಲಾ ಹಿರಿಯ ನಾಯಕರು, ಸಂಸದರು, ಶಾಸಕರು, ಎಂಎಲ್‌ಸಿಗಳು, ಇತರ ಚುನಾಯಿತ ಪ್ರತಿನಿಧಿಗಳು ಮತ್ತು ಬೆಂಬಲಿಗರು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

 

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version