1:48 AM Thursday 16 - October 2025

ಉಡುಪಿ: ಕಾಂಗ್ರೆಸ್ ತೊರೆದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್

pramod madwaraj
07/05/2022

ಉಡುಪಿ:  ಮಾಜಿ ಸಚಿವ, ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ತಮ್ಮ ರಾಜೀನಾಮೆ ಪತ್ರವನ್ನು ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.

2013ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದ ಪ್ರಮೋದ್ ಮಧ್ವರಾಜ್ ಅಂದಿನ ಸಿಎಂ ಸಿದ್ದರಾಮಯ್ಯನವರ ಸಂಪುಟದಲ್ಲಿ ಸಚಿವರಾಗಿದ್ದರು.  2018ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಘುಪತಿ ಭಟ್ ವಿರುದ್ಧ ಸೋಲನುಭವಿಸಿದ್ದರು.

ಕಳೆದ ಹಲವು ಸಮಯಗಳಿಂದಲೂ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಇದೀಗ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ. ಆದರೆ, ಬಿಜೆಪಿಗೆ ಸೇರ್ಪಡೆಯ ಬಗ್ಗೆ ಇನ್ನೂ ಯಾವುದೇ ಮಾಹಿತಿಗಳು ತಿಳಿದು ಬಂದಿಲ್ಲ.

ಕಳೆದ ಮೂರು ವರ್ಷಗಳಿಂದ ಉಡುಪಿ ಕಾಂಗ್ರೆಸ್ ಘಟಕದ ಪರಿಸ್ಥಿತಿ ಸರಿ ಇಲ್ಲ. ಈ ಕುರಿತು ನಿಮ್ಮ ಜೊತೆ ಸಹ ಚರ್ಚೆ ನಡೆಸಿದ್ದೆ ಎಂದು ಪ್ರಮೋದ್ ಮಧ್ವರಾಜ್ ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕಾಡಿನಲ್ಲಿ ಏಕಾಂತದಲ್ಲಿದ್ದ ಪ್ರೇಮಿಗಳ ಮೇಲೆ ಹುಲಿ ದಾಳಿ: ಯುವಕ ಸಾವು

ತೀವ್ರ ಸ್ವರೂಪ ಪಡೆದುಕೊಂಡ ಪ್ರಜೆಗಳ ಹೋರಾಟ: ಶ್ರೀಲಂಕಾದಲ್ಲಿ ಮತ್ತೆ ತುರ್ತು ಪರಿಸ್ಥಿತಿ

ಮತ್ತೊಮ್ಮೆ ಗ್ರಾಹಕನ ಕೈ ಸುಟ್ಟ ಎಲ್ ಪಿಜಿ ಸಿಲಿಂಡರ್ ಬೆಲೆ: 50ರೂ. ಏರಿಕೆ

ಭಾವಿ ಪತಿಯನ್ನೇ ಅರೆಸ್ಟ್ ಮಾಡಿದ ಮಹಿಳಾ ಸಬ್ ಇನ್ಸ್ ಪೆಕ್ಟರ್!

ಗ್ರಾಹಕರಿಗೆ ಶಾಕ್ ನೀಡಲಿರುವ ಬ್ರಿಟಾನಿಯಾ:  ಬಿಸ್ಕೆಟ್ ಗಳ ಬೆಲೆ ಹೆಚ್ಚಾಗಲಿದೆಯೇ?

ಇತ್ತೀಚಿನ ಸುದ್ದಿ

Exit mobile version