ಬಿಜೆಪಿ ನಾಯಕರಿಗೆ ಮುಸ್ಲಿಮರ ಹೆಸರಿಟ್ಟು ಟ್ವೀಟ್ ಮಾಡಿದ ಕಾಂಗ್ರೆಸ್!
ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದ ಸಿ.ಟಿ.ರವಿ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದ್ದು, ಬಿಜೆಪಿ ನಾಯಕರು ಮುಸ್ಲಿಮರ ಟೋಪಿ ಧರಿಸಿರುವ ಫೋಟೋಗಳನ್ನು ಟ್ವೀಟ್ ಮಾಡಿದ್ದು, ಅವರಿಗೆ ಮುಸ್ಲಿಮ್ ಹೆಸರುಗಳನ್ನಿಟ್ಟಿದೆ.
ಜಗದೀಶ್ ಶೆಟ್ಟರ್, ಆರ್.ಅಶೋಕ್ ಟಿಪ್ಪು ಸುಲ್ತಾನ್ ಟೋಪಿ ಧರಿಸಿರುವ ಫೋಟೋ ಟ್ವೀಟ್ ಮಾಡಿ, ಇವರಿಗೆ “ಜಬ್ಬಾರ್ ಖಾನ್” “ಅಶ್ವಾಖ್ ಇನಾಯತ್ ಖಾನ್” ಎಂದು ಹೆಸರಿಡುತ್ತೀರಾ? ಸಿ.ಟಿ.ರವಿ ಅವರೇ? ಎಂದು ಪ್ರಶ್ನಿಸಿದೆ.
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮುಸ್ಲಿಮರ ಟೋಪಿ ಧರಿಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿ, ಇವರಿಗೆ ಮಹಮದ್ ಗಡ್ಕರಿ ಶೇಕ್ ಎಂದು ಮರುನಾಮಕರಣ ಮಾಡುವಿರಾ? ಎಂದು ಸಿ.ಟಿ.ರವಿ ಅವರನ್ನು ಪ್ರಶ್ನಿಸಿದೆ.
ಮುಸ್ಲಿಮರೊಂದಿಗೆ ಕಾರ್ಯಕ್ರಮವೊಂದರಲ್ಲಿ ಟೋಪಿ ಧರಿಸಿ ಸಿಎಂ ಬೊಮ್ಮಾಯಿ ಅವರು ಭಾಗವಹಿಸಿದ್ದ ಹಳೆಯ ಫೋಟೋ ಟ್ವೀಟ್ ಮಾಡಿರುವ ಕಾಂಗ್ರೆಸ್ ಇವರನ್ನು “ಬೊಮ್ಮಾಯುಲ್ಲಾ ಖಾನ್” ಎಂದು ಕರೆಯಬಹುದೇ ಬಿಜೆಪಿ? ಎಂದು ಪ್ರಶ್ನಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka