ವಿರೋಧಿಸೋದು ಬಿಟ್ರೆ, ಕಾಂಗ್ರೆಸ್ ಗೆ ಬೇರೇನೂ ಗೊತ್ತಿಲ್ಲ: ನಳಿನ್ ಕುಮಾರ್ ಕಟೀಲ್ - Mahanayaka

ವಿರೋಧಿಸೋದು ಬಿಟ್ರೆ, ಕಾಂಗ್ರೆಸ್ ಗೆ ಬೇರೇನೂ ಗೊತ್ತಿಲ್ಲ: ನಳಿನ್ ಕುಮಾರ್ ಕಟೀಲ್

naleen kumar kateel
12/06/2021


Provided by

ಪುತ್ತೂರು:  ಕಾಂಗ್ರೆಸ್ ಗೆ ವಿರೋಧ ಮಾಡುವುದು ಬಿಟ್ರೆ, ಬೇರೇನೂ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದು,  ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಪ್ರತಿಯೊಂದಕ್ಕೂ ವಿರೋಧ ಮಾಡುತ್ತಲೇ ಇರುತ್ತದೆ ಎಂದು ನಳಿಕ್ ಕುಮಾರ್ ಟೀಕಿಸಿದರು.

ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಕೊವಿಡ್ ಲಸಿಕೆ ವಿಚಾರದಲ್ಲಿ ರಾಜಕೀಯ ಮಾಡಿದ ಕಾಂಗ್ರೆಸ್, ಪೆಟ್ರೋಲ್, ಡೀಸೆಲ್ ವಿಚಾರದಲ್ಲಿಯೂ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆಯಾದ ಕಾರಣ ದೇಶದಲ್ಲೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಬೇಕಾಗಿದೆ. ಈ ಬೆಳವಣಿಗೆ ಯಾವುದೇ ಪಕ್ಷ ಆಡಳಿತದಲ್ಲಿದ್ದರೂ ನಡೆದುಕೊಂಡು ಬಂದಿದೆ. ಕೋವಿಡ್ ಸಂಕಷ್ಟದ ದಿನಗಳಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಕುಸಿಯದಂತೆ ಹಾಗೂ ದೇಶದ ಜನತೆಯ ಹಿತದೃಷ್ಟಿಯಿಂದ ಕೇಂದ್ರ ಹಲವು ನಿರ್ಧಾರಗಳನ್ನು ಕೈಗೊಂಡಿದ್ದು, ಬೆಲೆ ಇಳಿಕೆಯ ಬಗ್ಗೆಯೂ ಶೀಘ್ರವೇ ನಿರ್ಧಾರ ತೆಗೆದುಕೊಳ್ಳಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ