ಕಾಂಗ್ರೆಸ್ ಕಚೇರಿ ಮೇಲೆ ದಾಳಿ: ಕಾರುಗಳ ಧ್ವಂಸ; ಬಿಜೆಪಿ ವಿರುದ್ಧ ದಾಳಿ ಆರೋಪ

06/05/2024

ಉತ್ತರ ಪ್ರದೇಶದ ಅಮೇಥಿಯಲ್ಲಿರುವ ಕಾಂಗ್ರೆಸ್ ಕಚೇರಿ ಮೇಲೆ ಭಾನುವಾರ ಮಧ್ಯರಾತ್ರಿ ದಾಳಿ ನಡೆದಿದೆ. ಅಪರಿಚಿತ ದುಷ್ಕರ್ಮಿಗಳು ಹೊರಗೆ ನಿಲ್ಲಿಸಿದ್ದ ಡಜನ್‌ಗಟ್ಟಲೆ ವಾಹನಗಳನ್ನು ಧ್ವಂಸಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ದೂರಿನ ಆಧಾರದ ಮೇಲೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಈ ಮಧ್ಯೆ ಈ ದಾಳಿಗೆ “ಬಿಜೆಪಿ ಗೂಂಡಾಗಳು” ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ. ಕಾರಿನ ಕಿಟಕಿಗಳು ಒಡೆದು ಅದರ ಗಾಜಿನ ತುಂಡುಗಳು ನೆಲದ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದನ್ನು ತೋರಿಸುವ ವೀಡಿಯೊವನ್ನು ಕಾಂಗ್ರೆಸ್ ಹಂಚಿಕೊಂಡಿದೆ. ಅಮೇಥಿಯಲ್ಲಿ ಸೋಲುವ ಭಯದಿಂದ ಬಿಜೆಪಿ ಹಿಂಸಾಚಾರಕ್ಕೆ ಇಳಿದಿದೆ ಎಂದು ಪಕ್ಷ ಆರೋಪಿಸಿದೆ. ಅಮೇಥಿಯ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಅವರನ್ನೂ ಅವರು ಉಲ್ಲೇಖಿಸಿದ್ದಾರೆ.

ಸೋಲಿನಿಂದ ಹತಾಶರಾದ ಬಿಜೆಪಿಯ ಗೂಂಡಾಗಳು ಕೋಲುಗಳು ಮತ್ತು ರಾಡ್ ಗಳೊಂದಿಗೆ ಅಮೇಥಿಯ ಕಾಂಗ್ರೆಸ್ ಕಚೇರಿಯ ಹೊರಗೆ ತಲುಪಿ ಅಲ್ಲಿ ನಿಲ್ಲಿಸಿದ್ದ ವಾಹನಗಳನ್ನು ಧ್ವಂಸಗೊಳಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಮೇಥಿಯ ಜನರ ಮೇಲೆ ಮಾರಣಾಂತಿಕ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಅನೇಕ ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಸ್ಥಳೀಯರ ವಾಹನಗಳಿಗೂ ಹಾನಿಯಾಗಿದೆ. ಇಡೀ ಘಟನೆಯ ಸಮಯದಲ್ಲಿ ಪೊಲೀಸ್ ಆಡಳಿತವು ಮೂಕ ಪ್ರೇಕ್ಷಕನಾಗಿ ಉಳಿಯಿತು. ಅಮೇಥಿಯಲ್ಲಿ ಬಿಜೆಪಿ ಹೀನಾಯವಾಗಿ ಸೋಲಲಿದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version