ಸಂವಿಧಾನ ತಿದ್ದುಪಡಿ ಹೇಳಿಕೆ: ಡಿಕೆಶಿ ಭಾವಚಿತ್ರಕ್ಕೆ ಮೊಟ್ಟೆ ಹೊಡೆದ ಬಿಜೆಪಿ ಕಾರ್ಯಕರ್ತರು

25/03/2025
ಚಿಕ್ಕಮಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಸಂವಿಧಾನ ತಿದ್ದುಪಡಿ ಹೇಳಿಕೆ ವಿಚಾರಕ್ಕೆ ಬಿಜೆಪಿ ಕಿಡಿಕಾರಿದ್ದು, ಡಿಕೆಶಿ ಭಾವಚಿತ್ರಕ್ಕೆ ಮೊಟ್ಟೆ ಹೊಡೆದು ಆಕ್ರೋಶ ವ್ಯಕ್ತಪಡಿಸಿದೆ.
ಅನ್ನಭಾಗ್ಯದ ಪ್ಲೆಕ್ಸ್ ಗೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಹೊಡೆದ ಘಟನೆ ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ನಡೆಯಿತು.
ಇಂದು ಆಜಾದ್ ಪಾರ್ಕ್ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಪ್ರತಿಭಟನೆ ವೇಳೆ ಸರ್ಕಾರ ಹಾಗೂ ಡಿ.ಕೆ. ಶಿವಕುಮಾರ್ ವಿರುದ್ದ ಪ್ರತಿಭಟನಾಕಾರರು ಘೋಷಣೆ ಕೂಗಿದರು.
ನಗರದ ಆಜಾದ್ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯಿತು. ಬಿಜೆಪಿ ಜಿಲ್ಲಾ ಕಚೇರಿಯಿಂದ ಆಜಾದ್ ಪಾರ್ಕ್ ವರೆಗೆ ಮೆರವಣಿಗೆ ನಡೆಯಿತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/HEkqDgrW2BlJLad5kZ1DX7