ನನ್ನನ್ನು ಜೈಲಿಗೆ ಕಳಿಸಿದರೂ ಶಾಲೆಗಳ ನಿರ್ಮಾಣ, ಅಭಿವೃದ್ಧಿ ಕೆಲಸ ನಿಲ್ಲಲ್ಲ: ಅರವಿಂದ್ ಕೇಜ್ರಿವಾಲ್

04/02/2024
ನವದೆಹಲಿ: ನನ್ನನ್ನು ಜೈಲಿಗೆ ಕಳುಹಿಸಿದರೂ ಶಾಲೆಗಳ ನಿರ್ಮಾಣ ಮತ್ತು ಜನರಿಗೆ ಉಚಿತ ಚಿಕಿತ್ಸೆಯಂತಹ ಅಭಿವೃದ್ಧಿ ಕಾರ್ಯಗಳು ನಿಲ್ಲುವುದಿಲ್ಲ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಿರಾರಿಯಲ್ಲಿ ಎರಡು ಶಾಲಾ ಕಟ್ಟಡಗಳ ಶಂಕುಸ್ಥಾಪನೆ ನೆರವೇರಿಸಿ ಅರವಿಂದ್ ಕೇಜ್ರಿವಾಲ್ ಮಾತನಾಡುತ್ತಿದ್ದರು.
ಶಾಲೆಗಳನ್ನು ನಿರ್ಮಿಸಿದ ಕಾರಣಕ್ಕಾಗಿ ಮನೀಷ್ ಸಿಸೋಡಿಯಾ ಅವರನ್ನು ಜೈಲಿಗೆ ಹಾಕಲಾಯಿತು. ಮೊಹಲ್ಲಾ ಕ್ಲಿನಿಕ್ ಗಳನ್ನು ಆರಂಭಿಸಿದ್ದರಿಂದ ಸತ್ಯೇಂದ್ರ ಜೈನ್ ಅವರನ್ನು ಜೈಲಿಗೆ ಕಳುಹಿಸಲಾಯಿತು ಎಂದು ಅವರು ದೂರಿದರು.
ಇಡಿ ಮತ್ತು ಸಿಬಿಐ ಸೇರಿದಂತೆ ಎಲ್ಲಾ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಎಎಪಿ ನಾಯಕರು ವಿರುದ್ಧ ಬಿಡಲಾಗಿದೆ ಎಂದು ಕೇಜ್ರಿವಾಲ್ ಇದೇ ವೇಳೆ ಆರೋಪಿಸಿದರು.
ಕೇಜ್ರಿವಾಲ್ ನ್ನು ಜೈಲಿಗೆ ಹಾಕಿದರೂ, ಶಾಲೆಗಳು ಮತ್ತು ಮೊಹಲ್ಲಾ ಕ್ಲಿನಿಕ್ ಗಳ ನಿರ್ಮಾಣ ನಿಲ್ಲಿಸಲು ನಿಮ್ಮಿಂದ ಸಾಧ್ಯವಿಲ್ಲ ಎಂದು ಕೇಜ್ರಿವಾಲ್ ಗುಡುಗಿದರು.