ಆಘಾತ: ಯಮನಾಗಿ ಬಂದ ಹೈಟೆನ್ಷನ್ ವಿದ್ಯುತ್ ತಂತಿ; ವಿದ್ಯುತ್ ಸ್ಪರ್ಶದಿಂದ ಬಲಿಯಾಯ್ತು ಕಟ್ಟಡ ನಿರ್ಮಾಣ ಕಾರ್ಮಿಕನ ಜೀವ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಕಟ್ಟಡ ನಿರ್ಮಾಣ ಕಾರ್ಯದ ವೇಳೆ ಹೈಟೆನ್ಷನ್ ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಈ ವ್ಯಕ್ತಿಯು ನಿರ್ಮಾಣ ಕಾರ್ಯ ನಡೆಯುತ್ತಿದ್ದ ವಸತಿ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದರು. ಇವರು ಸ್ಥಳದಲ್ಲಿ ಮುಚ್ಚುವ ಕೆಲಸದಲ್ಲಿ ತೊಡಗಿದ್ದಾಗ ಆಕಸ್ಮಿಕವಾಗಿ ಹೈಟೆನ್ಷನ್ ವಿದ್ಯುತ್ ಲೈನ್ ತಾಗಿದೆ.
ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ವ್ಯಕ್ತಿಯ ದೇಹವು ಸೆಕೆಂಡುಗಳ ಕಾಲ ಲೈವ್ ವೈರ್ ಗೆ ಸಿಲುಕಿ ಅಂತಿಮವಾಗಿ ನೆಲಕ್ಕೆ ಬಿದ್ದಿದೆ. ನೆಲಕ್ಕೆ ಬಿದ್ದ ನಂತರ ವ್ಯಕ್ತಿಯ ತಲೆ ಅವನ ದೇಹದಿಂದ ಬೇರ್ಪಟ್ಟಿದೆ.
ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಘಟನಾ ಸ್ಥಳಕ್ಕೆ ಧಾವಿಸಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ. ಆದರೆ ಈ ವ್ಯಕ್ತಿ ಕೆಲವೇ ಸೆಕೆಂಡುಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
ಹೈ ವೋಲ್ಟೇಜ್ ತಂತಿಗಳ ಬಳಿ ಅನಧಿಕೃತ ಕಟ್ಟಡ ನಿರ್ಮಾಣ ನಡೆಯುತ್ತಿದ್ದರೂ ಅದನ್ನು ತಡೆಯಲು ಸ್ಥಳೀಯ ಆಡಳಿತವು ಯಾವುದೇ ಮಧ್ಯಪ್ರವೇಶ ಮಾಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇತ್ತೀಚೆಗೆ ದಕ್ಷಿಣ ಕಾನ್ಪುರದ ಮೇಲ್ಛಾವಣಿಯಲ್ಲಿ ಸಹ ಹೈಟೆನ್ಷನ್ ತಂತಿ ತಾಗಿ ಬಂದ ತಾಯಿ ಮತ್ತು ಮಗಳು ಗಂಭೀರವಾಗಿ ಗಾಯಗೊಂಡಿದ್ದರು.