ಕಂಟೇನರ್ ಲಾರಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

accident
28/04/2023

ಬೆಂಗಳೂರು: ಕಂಟೇನರ್‌ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಲ್ಲಿನ ಮಡಿವಾಳ ಸಮೀಪದ ಮೈಕೋಬಂಡೆ ಬಳಿ ನಡೆದಿದೆ.

ಕಂಟೇನರ್ ಲಾರಿ ಚಾಲಕ ಬೈಕ್‌ ಗೆ ಡಿಕ್ಕಿ ಹೊಡೆದಿದ್ದು ನಂತರ ಘಟನಾ ಸ್ಥಳದಿಂದ ಪರಾರಿ ಆಗಿದ್ದಾನೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಗಾಯಗೊಂಡ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಸದ್ಯ ಮೃತನ ಹೆಸರು ಹಾಗೂ ವಿಳಾಸ ತಿಳಿದು ಬಂದಿಲ್ಲ. ಆಡುಗೋಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಪತ್ತೆಗಾಗಿ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಲಾಗುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

 

ಇತ್ತೀಚಿನ ಸುದ್ದಿ

Exit mobile version