ಬಿಜೆಪಿ ಟಿಕೆಟ್ ಸಿಗದಿದ್ರೆ ಪಕ್ಷೇತರನಾಗಿ ಸ್ಪರ್ಧೆ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್
ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಬಿಜೆಪಿ ಟಿಕೆಟ್ ಸಿಗದಿದ್ದರೆ, ಪಕ್ಷೇತರನಾಗಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.
ಹೈಕಮಾಂಡ್ ಗಳ ಕರೆ ಹಿನ್ನೆಲೆ ದೆಹಲಿಗೆ ಪ್ರಯಾಣಿಸುವುದಕ್ಕೂ ಮುನ್ನ ಮಾಧ್ಯಮಗಳ ಪ್ರಶ್ನೆಗೆ ಅವರು ಉತ್ತರಿಸಿದರು.
ಬಿಜೆಪಿ ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸಿ ಗೆದ್ದು ಮತ್ತೆ ಎನ್ ಡಿಎ ಭಾಗವಾಗುವುದಾಗಿ ತಿಳಿಸಿದ ಅವರು, ಏನೇನು ರಾಜಕೀಯ ತಿರುವು ಪಡೆದುಕೊಳ್ಳುತ್ತದೆ ಎನ್ನುವುದನ್ನು ಮುಂದೆ ನೋಡೋಣ ಅಂತ ಹೇಳಿದ್ರು.
ತಾಲೂಕಿನ ಜನರು ನನ್ನ ಮೇಲೆ ವಿಶ್ವಾಸವಿಟ್ಟಿದ್ದಾರೆ. ಯಾವ ಚಿನ್ಹೆಯಡಿ ಸ್ಪರ್ಧಿಸಿದರೂ ಗೆಲ್ಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಕ್ಷೇತ್ರದ ಸಮಾನ ಮನಸ್ಕ ವೇದಿಕೆಯಿಂದಲೂ ಸ್ಪರ್ಧೆಗೆ ಒತ್ತಾಯವಿರುವುದಾಗಿ ತಿಳಿಸಿದರು.
ಕಾಂಗ್ರೆಸ್ ನಿಂದ ಸ್ಪರ್ಧಿಸುವ ಯೋಚನೆ ಇದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಗೆ ಹೋಗುವ ಆಲೋಚನೆ ಇಲ್ಲ, ಡಿಕೆಶಿ ಏನೇನೋ ಮಾತನಾಡುತ್ತಿದ್ದಾರೆ ಅದು ಅವರ ರಾಜಕೀಯ ತಂತ್ರಗಾರಿಕೆ, ನನಗೂ ಕುಮಾರಸ್ವಾಮಿ ಅವರಿಗೂ ಭಿನ್ನಭಿಪ್ರಾಯ ಏನಿದೆ? ಕುಮಾರಸ್ವಾಮಿ ಮನಸ್ಸು ಬದಲಿಸಬಹುದು, ಒಪ್ಪದಿದ್ದರೆ ಮುಂದಿನ ದಾರಿ ನೋಡೋಣ ಅಂತ ಹೇಳಿದ್ರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: