ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರಿದ ಧಾರಾಕಾರ ಮಳೆ - Mahanayaka
11:53 PM Thursday 11 - December 2025

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರಿದ ಧಾರಾಕಾರ ಮಳೆ

chikamaglore
03/07/2024

ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಗಾಳಿ–ಮಳೆ ಮುಂದುವರೆದಿದ್ದು, ಚಾರ್ಮಾಡಿ, ಕೊಟ್ಟಿಗೆಹಾರ ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದೆ.

ನಿನ್ನೆ ರಾತ್ರಿಯಿಂದಲೂ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಕೊಟ್ಟಿಗೆಹಾರ, ಬಾಳೂರು, ಬಣಕಲ್ ಸೇರಿ ಹಲವೆಡೆ ಮಳೆ, ವಿದ್ಯುತ್ ಕಣ್ಣ ಮುಚ್ಚಾಲೆಯಾಡುತ್ತಿದೆ.

ಭಾರೀ ಮಳೆಯಿಂದಾಗಿ ಚಾರ್ಮಾಡಿ ಘಾಟ್ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿದೆ. ಮಂಗಳೂರು—ಮೂಡಿಗೆರೆ–ಚಿಕ್ಕಮಗಳೂರು ಪ್ರಯಾಣಿಕರರು ಇದರಿಂದ ಪರದಾಡುವಂತಾಗಿದೆ.

ಇನ್ನೊಂದೆಡೆ ಭಾರೀ ಮಳೆಯಿಂದಾಗಿ ಆಂಬುಲೆನ್ಸ್ ಚಾಲಕರಿಗೂ ಸಂಕಷ್ಟ ಸೃಷ್ಟಿಯಾಗಿದೆ. ಮಂಜು ಮಿಶ್ರಿತ ಮಳೆಯಿಂದಾಗಿ ರಸ್ತೆ ಕಾಣದೆ ವಾಹನಗಳು ನಿಂತಲ್ಲೇ ನಿಂತಿವೆ. ನಿನ್ನೆ ರಾತ್ರಿಯಿಂದಲೂ ಎಡೆಬಿಡದೆ ಮಳೆ ಸುರಿಯುತ್ತಿದೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ