ಅತಿಥಿ ಬಲಪಂಥೀಯ ಸಂಘಟನೆಯ ವ್ಯಕ್ತಿ ಎಂಬ ವಿವಾದ: ಹಂಪನಕಟ್ಟೆ ಮಂಗಳೂರು ವಿವಿ ಕಾರ್ಯಕ್ರಮ ಮುಂದೂಡಿಕೆ - Mahanayaka
12:59 AM Tuesday 28 - October 2025

ಅತಿಥಿ ಬಲಪಂಥೀಯ ಸಂಘಟನೆಯ ವ್ಯಕ್ತಿ ಎಂಬ ವಿವಾದ: ಹಂಪನಕಟ್ಟೆ ಮಂಗಳೂರು ವಿವಿ ಕಾರ್ಯಕ್ರಮ ಮುಂದೂಡಿಕೆ

mangalore university
22/06/2023

ಮಂಗಳೂರು ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಜೂನ್ 23 ಮತ್ತು 24ರಂದು ನಡೆಸಲು ಉದ್ದೇಶಿಸಲಾಗಿದ್ದ ಕಾರ್ಯಕ್ರಮವೊಂದನ್ನು ಅನಿವಾರ್ಯ ಕಾರಣದಿಂದ ಮುಂದೂಡಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಜೂನ್ 23ರಂದು ನಡೆಯಬೇಕಿದ್ದ ಪ್ರತಿಭಾ ದಿನಾಚರಣೆ ಮತ್ತು ಜೂನ್ 24ರಂದು ನಡೆಯಬೇಕಿದ್ದ ಕಾಲೇಜು ವಾರ್ಷಿಕೋತ್ಸವವನ್ನು ಮುಂದೂಡಲಾಗಿದೆ. ಈ ಎರಡೂ ದಿನ ಎಂದಿನಂತೆ ತರಗತಿ ನಡೆಯಲಿದೆ. ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಬರುವಂತೆ ಸೂಚಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಬಲಪಂಥೀಯ ಸಂಘಟನೆಯಲ್ಲಿ ಗುರುತಿಸಿರುವ ಪತ್ರಕರ್ತ ಎನ್ನಲಾದ ಶ್ರೀಕಾಂತ್ ಶೆಟ್ಟಿ ಕಾರ್ಕಳ ಎಂಬ ವ್ಯಕ್ತಿಯನ್ನು ಮುಖ್ಯ ಅತಿಥಿಯನ್ನಾಗಿ ಆಹ್ವಾನಿಸಲಾಗಿತ್ತು.

ಈ ಬಗ್ಗೆ ಮಾಹಿತಿ ಪಡೆದ ಎನ್‌ ಎಸ್‌ ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಮಂಗಳೂರು ವಿವಿ ಕುಲಪತಿಗೆ ಮನವಿ ಸಲ್ಲಿಸಿ ಮತೀಯ ದ್ವೇಷ ಹರಡುವ ಶ್ರೀಕಾಂತ್ ಶೆಟ್ಟಿ ಕಾರ್ಕಳ ಎಂಬ ವ್ಯಕ್ತಿಯನ್ನು ಸರಕಾರಿ ಕಾಲೇಜಿನ ಕಾರ್ಯಕ್ರಮಕ್ಕೆ ಅತಿಥಿಯನ್ನಾಗಿ ಆಹ್ವಾನಿಸಬಾರದು ಎಂದು ಒತ್ತಾಯಿಸಿ ಮನವಿ ಸಲ್ಲಿಸಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ