ಗೃಹಲಕ್ಷ್ಮಿ ಫಲಾನುಭವಿಗಳ ಹೆಸರಿನಲ್ಲಿ ಶೀಘ್ರವೇ ಸಹಕಾರ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ - Mahanayaka
1:06 PM Sunday 28 - September 2025

ಗೃಹಲಕ್ಷ್ಮಿ ಫಲಾನುಭವಿಗಳ ಹೆಸರಿನಲ್ಲಿ ಶೀಘ್ರವೇ ಸಹಕಾರ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

lakshmi hebbalkar
24/09/2025

ಮೈಸೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಶೀಘ್ರವೇ ಸಹಕಾರ ಸಂಘ ಸ್ಥಾಪನೆ ಮಾಡಲಾಗುವುದು ಎಂದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್   ಹೇಳಿದ್ದಾರೆ.


Provided by

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಜೆ.ಕೆ.ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಸರಾ–2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆ ಎಂದರೇ ಸ್ವಾವಲಂಬನೆಯ ಪ್ರತೀಕ. ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ ಕಂಡಿದೆ.  ಮಹಿಳೆಯರಿಗೆ ಆರ್ಥಿಕವಾಗಿ ಸ್ವಾವಲಂಬಿ ಜೀವನವನ್ನು ಕಟ್ಟಿಕೊಡಬೇಕು. ದುಡಿಯುವ ಕೈಗಳಿಗೆ ಕೆಲಸ ಕೊಡಬೇಕು. ಮಹಿಳೆಯರು ಸ್ವಾವಲಂಬಿಯಾಗಿ ಜೀವಿಸಲು ಸಹಾಯ ಮಾಡಬೇಕು ಎಂಬ ಚಿಂತನೆಯನ್ನು ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಅವರು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮಹಿಳೆಯರನ್ನು ಕೇಂದ್ರೀಕೃತವಾಗಿ ಇಟ್ಟುಕೊಂಡು ಈ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಕೋಟ್ಯಂತರ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ನುಡಿದರು.

ಮಹಿಳೆಯರಿಗೆ ಬ್ಯಾಂಕ್‌ ಗಳಿಂದ ಸರಿಯಾಗಿ ಸಾಲ ಸೌಲಭ್ಯ ಸಿಗುತ್ತಿಲ್ಲ. ಇದರಿಂದ ಅವರಿಗೆ ಸ್ವಾವಲಂಬಿಯಾಗಿ ಜೀವನ ಕಟ್ಟಿಕೊಳ್ಳಲು ಕಷ್ಟವಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಆರಂಭಿಸಲು ಚಿಂತನೆ ನಡೆಸಿದೆ. ಈ ಮೂಲಕ ಮಹಿಳೆಯರಿಗೆ ಸಾಲ ಸೌಲಭ್ಯ ನೀಡಿ ಅವರನ್ನು ಸ್ವಾವಲಂಬಿಗಳಾಗಿ ಮಾಡಲಾಗುವುದು ಎಂದು ತಿಳಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ