500 ರೂ. ಕಂತೆ ಕಂತೆ ನೋಟುಗಳ ಜೊತೆ ಸೆಲ್ಫಿ ತೆಗೆದುಕೊಂಡ ಪೊಲೀಸ್ ಅಧಿಕಾರಿಯ ಹೆಂಡ್ತಿ ಮಕ್ಳು: ಅಧಿಕಾರಿಗೆ ಸಂಕಷ್ಟ! - Mahanayaka

500 ರೂ. ಕಂತೆ ಕಂತೆ ನೋಟುಗಳ ಜೊತೆ ಸೆಲ್ಫಿ ತೆಗೆದುಕೊಂಡ ಪೊಲೀಸ್ ಅಧಿಕಾರಿಯ ಹೆಂಡ್ತಿ ಮಕ್ಳು: ಅಧಿಕಾರಿಗೆ ಸಂಕಷ್ಟ!

cop family
30/06/2023


Provided by

500 ರೂಪಾಯಿಗಳ ಕಂತೆ ಕಂತೆ ನೋಟುಗಳ ಜೊತೆಗೆ ಪೊಲೀಸ್ ಅಧಿಕಾರಿಯ ಹೆಂಡ್ತಿ ಮಕ್ಕಳು ಸೆಲ್ಫಿ ತೆಗೆದುಕೊಂಡಿದ್ದು, ಇದೀಗ  ಪೊಲೀಸ್ ಅಧಿಕಾರಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಉತ್ತರ ಪ್ರದೇಶದ ಉನ್ನಾವೋದಲ್ಲಿ ಈ ಘಟನೆ ನಡೆದಿದ್ದು, ಪೊಲೀಸ್ ಅಧಿಕಾರಿಯ ಕುಟುಂಬ ಕಂತೆ ಕಂತೆ ನೋಟಿನೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದು, ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಅಧಿಕಾರಿಯನ್ನು ವರ್ಗಾವಣೆ ಮಾಡಿದ್ದು, ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಠಾಣಾ ಉಸ್ತುವಾರಿಯಾಗಿರುವ ರಮೇಶ್ ಚಂದ್ರ ಸಹಾನಿ ಅವರ ಕುಟುಂಬವು ಸುಮಾರು 14 ಲಕ್ಷ ಹಣದ 500 ರೂಪಾಯಿಗಳ ನೋಟುಗಳ ಕಂತೆಗಳನ್ನು ಹಾಸಿಗೆ ಮೇಲೆ ಹರಡಿಕೊಂಡು ಸೆಲ್ಫಿ ತೆಗೆದುಕೊಂಡಿದ್ದಾರೆ.

ಇನ್ನೂ ಘಟನೆಯ ಬಗ್ಗೆ ಸ್ಪಷ್ಟನೆ ನೀಡಿರುವ ರಮೇಶ್ ಚಂದ್ರ ಸಹಾನಿ, ನವೆಂಬರ್ 14ರಂದು ತಮ್ಮ ಕುಟುಂಬದ ಆಸ್ತಿಯನ್ನು ಮಾರಾಟ ಮಾಡಿದಾಗ ಬಂದ ಹಣ ಇದಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಈ ನಡುವೆ ಅಧಿಕಾರಿ ವಿರುದ್ಧ ತನಿಖೆ ಆರಂಭವಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ