ಕಾಂಗ್ರೆಸ್ ತೆರಿಗೆ ಹಣ ಸರಿಯಾಗಿ ಬಳಸದ ಕಾರಣ ಕೊರೊನಾ ನಿಯಂತ್ರಿಸಲು ಕಷ್ಟವಾಗುತ್ತಿದೆ | ನಳಿನ್ ಕುಮಾರ್
17/05/2021
ಬೆಂಗಳೂರು: ಕಾಂಗ್ರೆಸ್ ಜನರ ತೆರಿಗೆ ಹಣವನ್ನು ವಿವೇಚನೆಯಿಂದ ಬಳಸಿದ್ದರೆ ಕೊರೊನಾ ನಿಯಂತ್ರಿಸಲು ಕಷ್ಟವಾಗುತ್ತಿರಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.
ಕಾಂಗ್ರೆಸ್ ಗೆ ದೂರದೃಷ್ಟಿ ಇರಲಿಲ್ಲ, ದೇಶವನ್ನು ಬಹುಕಾಲ ಆಳಿದ ಕಾಂಗ್ರೆಸ್ ಗೆ ದೇಶವನ್ನು ಲೂಟಿ ಮಾಡುವ ಯೋಚನೆ ಬಿಟ್ಟು ಮತ್ಯಾವ ಯೋಚನೆಯೂ ಇರಲಿಲ್ಲ. ಕೊವಿಡ್ ಪರಿಹಾರ ಕಾರ್ಯದಲ್ಲಿ ಸರ್ಕಾರ ಮತ್ತು ಪಕ್ಷ ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದೆ ಎಂದು ಕಟೀಲ್ ಎಂದು ಕಟೀಲ್ ತಿಳಿಸಿದ್ದಾರೆ.
ಶಾಸಕರು, ಪಕ್ಷದ ಜಿಲ್ಲಾಧ್ಯಕ್ಷರು ಸೇರಿ ಜಿಲ್ಲೆಗಳಲ್ಲಿ ವಾರ್ ರೂಮ್ ತೆರೆದಿದ್ದೇವೆ. ಇಲ್ಲಿಗೆ ಬರುವ ಕರೆಗಳನ್ನು ಜಿಲ್ಲಾಡಳಿತ, ಉಸ್ತುವಾರಿ ಸಚಿವರಿಗೆ ತಲುಪಿಸುವ ಕೆಲಸ ಸೇರಿದಂತೆ 13 ಅಂಶಗಳನ್ನೊಳಗೊಂಡ ಸೇವೆಗಳನ್ನು ಮಾಡಲಾಗುತ್ತಿದೆ ಎಂದು ಸರ್ಕಾರದ ಕಾರ್ಯವೈಖರಿಯನ್ನು ನಳಿನ್ ಕುಮಾರ್ ಕಟೀಲ್ ಸಮರ್ಥಿಸಿದ್ದು, ಇದನ್ನು ಬಿಜೆಪಿಯ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿಯೂ ಪ್ರಕಟಿಸಲಾಗಿದೆ ಎಂದು ವರದಿಯಾಗಿದೆ.

























