ಕೊರೊನಾ ಸೋಂಕಿತರಿಗಾಗಿ ಆಂಬುಲೆನ್ಸ್ ಕೊಡುಗೆ ನೀಡಿದ ಸಿದ್ದರಾಮಯ್ಯ - Mahanayaka

ಕೊರೊನಾ ಸೋಂಕಿತರಿಗಾಗಿ ಆಂಬುಲೆನ್ಸ್ ಕೊಡುಗೆ ನೀಡಿದ ಸಿದ್ದರಾಮಯ್ಯ

siddaramahia
16/05/2021

ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯನವರು ತಾವು ಗೆದ್ದಿರುವ ಬಾದಾಮಿ ಕ್ಷೇತ್ರದಲ್ಲಿ ಕೊರೊನಾ ಸೋಂಕಿತರ ಅನುಕೂಲತೆಗಾಗಿ ಮೂರು ಆಂಬುಲೆನ್ಸ್ ಗಳನ್ನು ಕೊಡುಗೆಯಾಗಿ ನೀಡಿದ್ದಾರೆ.

ಈ ಆಂಬ್ಯುಲೆನ್ಸ್ ಗಳು ಬಾದಾಮಿ ಕ್ಷೇತ್ರದಲ್ಲಿ ಸಂಚರಿಸಲಿದ್ದು, ಕೋವಿಡ್ ಸೋಂಕಿತರಿಗೆ ನೆರವಾಗಲಿವೆ. ಇದೇ ವೇಳೆ ವೈದ್ಯರಿಗೆ N95 ಮಾಸ್ಕ್ ಗಳು, ಪಿಪಿಇ ಕಿಟ್ ಗಳನ್ನು ವಿತರಣೆ ಮಾಡಲಾಯಿತು.

ಕೊರೊನಾ ಸೋಂಕಿತರ ಅನುಕೂಲಕ್ಕಾಗಿ ಪಕ್ಷದ ವತಿಯಿಂದ ಸಹಾಯವಾಣಿ ಆರಂಭಿಸಲು ಸಿದ್ದರಾಮಯ್ಯ ಅವರು ಮುಖಂಡರಿಗೆ ಸೂಚನೆ ನೋಡಿದ್ದಾರೆ. ಕೋವಿಡ್ ಲಸಿಕೆ ಪಡೆಯಲು ಹೆಸರು ನೋಂದಾಯಿಸಿಕೊಳ್ಳುವವರಿಗೆ ಹೆಲ್ಫ್ ಡೆಸ್ಕ್ ಆರಂಭಿಸಲು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ