ಜಿ-20 ಶೃಂಗಸಭೆಗೆ ಕ್ಷಣಗಣನೆ: ವಿಶ್ವ ನಾಯಕರೊಂದಿಗೆ ಪ್ರಧಾನಿ ಮೋದಿ ನಡೆಸಲಿದ್ದಾರೆ 15ಕ್ಕೂ ಹೆಚ್ಚು ದ್ವಿಪಕ್ಷೀಯ ಸಭೆ - Mahanayaka

ಜಿ–20 ಶೃಂಗಸಭೆಗೆ ಕ್ಷಣಗಣನೆ: ವಿಶ್ವ ನಾಯಕರೊಂದಿಗೆ ಪ್ರಧಾನಿ ಮೋದಿ ನಡೆಸಲಿದ್ದಾರೆ 15ಕ್ಕೂ ಹೆಚ್ಚು ದ್ವಿಪಕ್ಷೀಯ ಸಭೆ

pm modi
08/09/2023


Provided by

ಜಿ–20 ಶೃಂಗಸಭೆಗೆ ಕ್ಷಣಗಣನೆ ಆರಂಭವಾಗಿದೆ. ಅಮೆರಿಕ ಅಧ್ಯಕ್ಷ ಜೋ ಬೈಡನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್ ಸೇರಿದಂತೆ ಹಲವು ದೇಶಗಳ ನಾಯಕರು ದೆಹಲಿಯ  ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬಂದಿಳಿಯಲಿದ್ದಾರೆ.

ಶೃಂಗಸಭೆ ಹಿನ್ನೆಲೆಯಲ್ಲಿ ನವದೆಹಲಿ ಭಿತ್ತಿಚಿತ್ರಗಳು, ಬ್ಯಾನರ್ ಗಳು, ಕಾರಂಜಿಗಳು ಮತ್ತು ಬೀದಿಯಲ್ಲಿ ಸಸ್ಯಗಳಿಂದ ಅಲಂಕರಿಸಲ್ಪಟ್ಟಿದೆ ಮತ್ತು ಪ್ರಧಾನ  ಕಾರ್ಯಕ್ರಮ ಆಯೋಜಿಸಿರುವ ಪ್ರಗತಿ ಮೈದಾನದಲ್ಲಿರುವ ಭಾರತ ಮಂಟಪದ ಮುಂದೆ ನಟರಾಜನ ದೈತ್ಯ ಪ್ರತಿಮೆಯನ್ನು ಸ್ಥಾಪಿಸಲಾಗಿದೆ.

ದೆಹಲಿಯ ವಿವಿಧ ಪ್ರದೇಶಗಳಲ್ಲಿ ಇಂದಿನಿಂದ ಮುಂದಿನ ಮೂರು ದಿನಗಳವರೆಗೆ ತುರ್ತು ಸೇವೆಗಳಿಗೆ ಹೊರತುಪಡಿಸಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.  ಶೃಂಗಸಭೆ ಅವಧಿಯಲ್ಲಿ ಪ್ರಧಾನಿ ಮೋದಿ ಅವರು ವಿಶ್ವ ನಾಯಕರೊಂದಿಗೆ 15 ಕ್ಕೂ ಹೆಚ್ಚು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ.

ಅಮೆರಿಕಾ, ಮಾರಿಷಸ್, ಬಾಂಗ್ಲಾದೇಶ ಹಾಗೂ ಯುಎಸ್ ಎ ನಾಯಕರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ನಾಳೆ ಯುಕೆ, ಜಪಾನ್, ಜರ್ಮನಿ ಮತ್ತು ಇಟಲಿ ಮತ್ತು  ನಾಡಿದ್ದು, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಅವರೊಂದಿಗೆ ಭೋಜನಕೂಟದೊಂದಿಗೆ ಸಭೆಯನ್ನು ಪ್ರಧಾನಿ ಮೋದಿ ನಡೆಸಲಿದ್ದಾರೆ.

ಉಳಿದಂತೆ  ಕೆನಡಾ, ಕೊಮೊರೊಸ್, ತುರ್ಕಿಯೆ, ಯುಎಇ, ದಕ್ಷಿಣ ಕೊರಿಯಾ, ಇಯು/ಇಸಿ, ಬ್ರೆಜಿಲ್ ಮತ್ತು ನೈಜೀರಿಯಾ ರಾಷ್ಟ್ರಗಳ ನಾಯಕರೊಂದಿಗೂ ಪ್ರಧಾನಿ ಮೋದಿ ದ್ವೀಪಕ್ಷೀಯ ಸಭೆ ನಡೆಸಲಿದ್ದು, ಹಲವು ಜಾಗತಿಕ ವಿಚಾರ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇತ್ತೀಚಿನ ಸುದ್ದಿ