ವಿವಾಹ ವಾರ್ಷಿಕೋತ್ಸವ ಆಚರಿಸಿದ ನಂತರ ಸಾವಿಗೆ ಶರಣಾದ ದಂಪತಿ
![couple](https://www.mahanayaka.in/wp-content/uploads/2025/01/Couple.jpg)
ಮುಂಬೈ: ಕುಟುಂಬಸ್ಥರು, ಸ್ನೇಹಿತರ ಜೊತೆಗೆ ತಮ್ಮ 26ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ನಂತರ ದಂಪತಿ ಸಾವಿಗೆ ಶರಣಾದ ಘಟನೆಯೊಂದು ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.
ಜೆರಿಲ್ ಡ್ಯಾಮ್ಸನ್ ಆಸ್ಕರ್ ಮಾನ್ ಕ್ರಿಫ್(57) ಹಾಗೂ ಪತ್ನಿ ಅನ್ನಿ(46) ಮಂಗಳವಾರ ತಮ್ಮ ವೆಡ್ಡಿಂಗ್ ಆ್ಯನಿವರ್ಸರಿ ಆಚರಿಸಿದ್ದರು. ಬಳಿಕ ಇಬ್ಬರೂ ನೇಣಿಗೆ ಶರಣಾಗಿದ್ದಾರೆ.
ಅನ್ನಿ ಮೊದಲು ನೇಣಿಗೆ ಶರಣಾಗಿದ್ದಾಳೆ. ಬಳಿಕ ಆಕೆಯ ಮೃತದೇಹಕ್ಕೆ ಮದುವೆಯಲ್ಲಿ ಧರಿಸಿದ್ದ ಬಟ್ಟೆಯನ್ನು ಹಾಕಿ ಪತಿ ಅಲಂಕರಿಸಿದ್ದಾನೆ. ಕೊನೆಗೆ ತಾನೂ ಮದುವೆಗೆ ಧರಿಸಿದ್ದ ಬಟ್ಟೆ ಧರಿಸಿಕೊಂಡು ನೇಣಿಗೆ ಶರಣಾಗಿದ್ದಾನೆ.
ಆತ್ಮಹತ್ಯೆಗೂ ಮೊದಲು ವಿಡಿಯೋ ಮಾಡಿದ್ದ ಈ ದಂಪತಿ, ನಮ್ಮ ಸಾವಿಗೆ ನಾವೇ ಕಾರಣ ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ ನಮ್ಮ ಆಸ್ತಿಯನ್ನು ಕುಟುಂಬಸ್ಥರು ಹಂಚಿಕೊಳ್ಳುವಂತೆ ತಿಳಿಸಿದ್ದಾರೆ. ಜೆರಿಲ್ ಹಾಗೂ ಅನ್ನಿಗೆ ಮಕ್ಕಳಿರಲಿಲ್ಲ. ಇದರಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: