10:25 PM Wednesday 28 - January 2026

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿಯ ದಾರುಣ ಸಾವು!

kundapura
29/09/2023

ಕುಂದಾಪುರ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಪತಿ ಮೃತಪಟ್ಟಿದ್ದು ಅವರನ್ನು ಕಾಪಾಡಲು ಹೋದ ಪತ್ನಿಗೂ ವಿದ್ಯುತ್ ತಗುಲಿ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಹೆಮ್ಮಾಡಿ ಸಮೀಪದ ಸುಳ್ಸೆ ಎಂಬಲ್ಲಿ ನಡೆದಿದೆ.

ಸುಳ್ಸೆಯರ ಮನೆ ನಿವಾಸಿ ಮಹಾಬಲ ದೇವಾಡಿಗ (55), ಅವರ ಪತ್ನಿ ಲಕ್ಷ್ಮೀ ದೇವಾಡಿಗ ಮೃತರು. ಕಟ್ ಬೆಲ್ತೂರು ಗ್ರಾ‌ಪಂ ವ್ಯಾಪ್ತಿಯ  ಸುಳ್ಸೆ ನಿವಾಸಿ ಮಹಾಬಲ ಅವರು ಕೂಲಿ ಕಾರ್ಮಿಕರಾಗಿದ್ದು ಮನೆ ಸಮೀಪದ ಕರಣಿಕರಮನೆ ಎಂಬಲ್ಲಿನ ಮನೆಯೊಂದಕ್ಕೆ  ಕೆಲಸಕ್ಕೆ ತೆರಳಿದ್ದು ಮಧ್ಯಾಹ್ನ 3 ಗಂಟೆಯಾದರೂ ಮನೆಗೆ ಬಾರದಿದ್ದಾಗ ಪತ್ನಿ ಲಕ್ಷ್ಮೀ ಕರಣಿಕರಮನೆಗೆ ಬಂದಿದ್ದು ಈ ವೇಳೆ ಕಾಲು ಹಾದಿ ಬಳಿಯ ತೋಡಿನಲ್ಲಿ ಮಹಾಬಲ‌ ಅವರು ವಿದ್ಯುತ್ ತಂತಿ ಹಿಡಿದುಕೊಂಡ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದು ಕೂಗಿಕೊಂಡ ಅವರು ಮರದ ಕೋಲು ಹಿಡಿದು ತಪ್ಪಿಸಲು ಹೋದಾಗ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಡಿವೈಎಸ್ಪಿ ಬೆಳ್ಳಿಯಪ್ಪ, ಶಂಕರನಾರಾಯಣ ವೃತ್ತನಿರೀಕ್ಷಕ ಜಯರಾಮ ಗೌಡ ಮೊದಲಾದವರು ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

Exit mobile version