ದುರಂತ: ಛತ್ತೀಸ್ ಗಢದ ರಾಯ್ಪುರದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ - Mahanayaka
11:49 PM Tuesday 16 - December 2025

ದುರಂತ: ಛತ್ತೀಸ್ ಗಢದ ರಾಯ್ಪುರದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

29/12/2023

ಛತ್ತೀಸ್ ಗಢದ ರಾಯ್ಪುರದಲ್ಲಿ ಒಂದೇ ಕುಟುಂಬದ ಮೂವರು ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ.

ಮೃತರನ್ನು ಲಖನ್ ಲಾಲ್ ಸೇನ್ (48), ಅವರ ಪತ್ನಿ ರಾನು ಸೇನ್ (42) ಮತ್ತು ಅವರ ಮಗಳು ಪಾಯಲ್ ಸೇನ್ (14) ಎಂದು ಗುರುತಿಸಲಾಗಿದೆ. ಸ್ಥಳದಿಂದ ಯಾವುದೇ ಆತ್ಮಹತ್ಯೆ ಪತ್ರವನ್ನು ವಶಪಡಿಸಿಕೊಳ್ಳಲಾಗಿಲ್ಲ.
ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಸೆಂಬರ್ 26 ರಂದು ನಡೆದ ಪ್ರತ್ಯೇಕ ಪ್ರಕರಣದಲ್ಲಿ, ಮಧ್ಯಪ್ರದೇಶದ ಇಂದೋ ರ್ ನಲ್ಲಿ 14 ವರ್ಷದ ಬಾಲಕ ತನ್ನ ಮೊಬೈಲ್ ಫೋನ್ ಅನ್ನು ಅತಿಯಾಗಿ ಬಳಸಿದ್ದಕ್ಕಾಗಿ ಕುಟುಂಬ ಸದಸ್ಯರು ಬೈದಿದ್ದರಿಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಂತರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕಳೆದ ಎರಡು ತಿಂಗಳಲ್ಲಿ ನಗರದಲ್ಲಿ ವರದಿಯಾದ ಎರಡನೇ ಘಟನೆ ಇದಾಗಿದೆ ಎಂದು ಅಧಿಕಾರಿಗಳು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ