7:36 PM Wednesday 22 - October 2025

ಕ್ರೌರ್ಯ: ದಂಪತಿಯನ್ನು ಕಂಬಕ್ಕೆ ಕಟ್ಟಿ ಥಳಿತ; ಭೀಕರ ಕೃತ್ಯದ ವಿಡಿಯೋ ವೈರಲ್

23/12/2024

ಬಿಹಾರದ ಮುಜಾಫರ್ ಪುರ ಜಿಲ್ಲೆಯಲ್ಲಿ ದಂಪತಿಯನ್ನು ಕಂಬಕ್ಕೆ ಕಟ್ಟಿಹಾಕಿ ಸ್ಥಳೀಯರು ಥಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ವೀಡಿಯೊ ವೈರಲ್ ಆಗಿದ್ದು ಇದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ವೀಡಿಯೊದಲ್ಲಿ ದಂಪತಿಯನ್ನು ಕಂಬಕ್ಕೆ ಕಟ್ಟಿಹಾಕಲಾಗಿದ್ದು, ಅವರನ್ನು ಸ್ಥಳೀಯರು ಸುತ್ತುವರೆದಿದ್ದಾರೆ. ಪುರುಷ ನೋವಿನಿಂದ ಬಳಲುತ್ತಿರುವಂತೆ ಕಂಡುಬಂದರೆ, ಮಹಿಳೆ ಅಳುವುದನ್ನು ಕೇಳಬಹುದು.

“ನಾವು ವೀಡಿಯೊದ ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿದ್ದೇವೆ. ವೀಡಿಯೊದಲ್ಲಿರುವ ಪುರುಷ ಬಲಿಪಶು ಮುಜಾಫರ್ಪುರದ ಸಕ್ರಾ ಪ್ರದೇಶದ ನಿವಾಸಿ ಎಂದು ತೋರುತ್ತದೆ. ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ನಿರ್ದೇಶಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ವಿದ್ಯಾ ಸಾಗರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇವರಿಬ್ಬರನ್ನು ವಿದ್ಯುತ್ ಕಂಬಕ್ಕೆ ಕಟ್ಟಿಹಾಕಲಾಯಿತು ಮತ್ತು ಸಕ್ರಾದಲ್ಲಿ ಜನರ ಗುಂಪು ಥಳಿಸಿತು. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version