8:43 AM Saturday 20 - December 2025

‘ಸನಾತನ ಧರ್ಮ’ ಕುರಿತ ವಿವಾದಾತ್ಮಕ ಹೇಳಿಕೆ: ಎಂ.ಕೆ.ಸ್ಟಾಲಿನ್ ಪುತ್ರನ ವಿರುದ್ಧ ಕೇಸ್ ಫೈಲ್

04/09/2023

ಸನಾತನ ಧರ್ಮ ಕುರಿತಾದ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ವಿರುದ್ಧ ಬಿಹಾರದ ಕೋರ್ಟ್ ನಲ್ಲಿ ದೂರು ದಾಖಲಾಗಿದೆ.

ಮುಜಾಫರ್‌ಪುರ ಮೂಲದ ವಕೀಲ ಸುಧೀರ್‌ ಕುಮಾರ್‌ ಓಜಾ, ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ ಪಂಕಜ್‌ ಕುಮಾರ್‌ ಲಾಲ್‌ ಅವರ ನ್ಯಾಯಾಲಯಕ್ಕೆ ದೂರು ಸಲ್ಲಿಸಿ ಈ ಹೇಳಿಕೆಗಳು ಹಿಂದೂ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ಆರೋಪಿಸಿದ್ದಾರೆ.

ರಾಜಕೀಯ ದಿಗ್ಗಜರು ಮತ್ತು ಇತರ ಸೆಲೆಬ್ರಿಟಿಗಳ ವಿರುದ್ಧದ ದೂರುಗಳಿಗಾಗಿ ಸುದ್ದಿಯಲ್ಲಿರುವ ಓಜಾ, ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ತಮಿಳುನಾಡು ಸಿಎಂರ ಪುತ್ರನನ್ನು ವಿಚಾರಣೆಗೆ ಒಳಪಡಿಸುವಂತೆ ಕೋರಿದ್ದಾರೆ. ಈ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 14 ಕ್ಕೆ ಮುಂದೂಡಲಾಗಿದೆ.

ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಮತ್ತು ತಮಿಳುನಾಡು ಯುವ ಕಲ್ಯಾಣ ಸಚಿವ ಉದಯನಿಧಿ ಸ್ಟಾಲಿನ್ , ಸನಾತನ ಧರ್ಮ ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ಶನಿವಾರ ಆರೋಪಿಸಿದ್ದರು. ಅಲ್ಲದೇ, ಅದನ್ನು ಕೊರೊನಾವೈರಸ್, ಮಲೇರಿಯಾ, ಡೆಂಗ್ಯೂ ವೈರಸ್ ಮತ್ತು ಸೊಳ್ಳೆಗಳಿಂದ ಉಂಟಾಗುವ ಜ್ವರಕ್ಕೆ ಹೋಲಿಸಿದ್ದರು.
ಉದಯ್ ಸ್ಟಾಲಿನ್ ಅವರ ಹೇಳಿಕೆಗೆ ದೇಶಾದ್ಯಂತ ಬಿಜೆಪಿಯಿಂದ ತೀವ್ರ ಟೀಕೆಗಳು ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

Exit mobile version