10:44 AM Thursday 11 - December 2025

ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆಯಾಗುತ್ತಿದ್ದಂತೆಯೇ ಕೋರ್ಟ್ ಮೊರೆ ಹೋದ 6 ರಾಜ್ಯ ಸಚಿವರು

06/03/2021

ಹಾವೇರಿ: ರಮೇಶ್ ಜಾರಕಿಹೊಳಿ ಕೇಸ್ ಪ್ರಗತಿಯಲ್ಲಿರುವಂತೆಯೇ  ಕರ್ನಾಟಕ ರಾಜ್ಯ ಸಂಪುಟದ ಆರು ಸಚಿವರು  ಕೋರ್ಟ್ ಮೊರೆ ಹೋಗಿದ್ದು, ತಮ್ಮ ವಿರುದ್ಧ ಮಾನಹಾನಿಕರ ವರದಿ ಪ್ರಕಟಿಸಬಾರದು ಎಂದು ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಸಚಿವ ಡಾ. ಕೆ. ಸುಧಾಕರ್, ಬಿ ಸಿ ಪಾಟೀಲ್, ಶಿವರಾಜ್ ಹೆಬ್ಬಾರ್, ಡಾ. ಕೆ ಸಿ ನಾರಾಯಣಗೌಡ, ಎಸ್ ಟಿ ಸೋಮಶೇಖರ್, ಭೈರತಿ ಬಸವರಾಜ್ ಅವರು ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಸಚಿವರು ಸಲ್ಲಿಸಿದ ಅರ್ಜಿ ಶನಿವಾರ ವಿಚಾರಣೆ ನಡೆಯಲಿದೆ ಎಂದು ಹೇಳಲಾಗಿದೆ.

ಇನ್ನೂ ಈ ಬಗ್ಗೆ ಟ್ವೀಟ್ ಮಾಡಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್, ಒಬ್ಬ ರೈತನ ಮಗನಾಗಿ ಯಾವುದೇ ಗಾಡ್ ಫಾದರ್ ಇಲ್ಲದೇ ಇಷ್ಟರ ಮಟ್ಟಕ್ಕೆ ಬೆಳೆದು ಬಂದಿದ್ದು ಬಹಳಷ್ಟು ಜನರಿಗೆ ಸಹಿಸಲು ಆಗುವುದಿಲ್ಲ. ಆದರೆ ಯಾವುದೋ ಕುತಂತ್ರಿಗಳ ರಾಜಕೀಯ ಷಡ್ಯಂತ್ರಕ್ಕೆ ನಮ್ಮ ಹೆಸರನ್ನು ವಿನಾಕಾರಣ ಸತ್ಯಾಸತ್ಯತೆ ಅರಿಯದೆ ನಮ್ಮ ತೇಜೋವಧೆ ಆಗಬಾರದು ಎಂಬ ದೃಷ್ಟಿಯಲ್ಲಿ, ಮುನ್ನೆಚ್ಚರಿಕೆಯ ಕ್ರಮವಾಗಿ ಕಾನೂನಿನ ಮೊರೆ ಹೋಗಿದ್ದೇವೆ. ಆದ್ದರಿಂದಲೇ ನಾವೆಲ್ಲರೂ ನಮ್ಮ ವಿರುದ್ಧ ಸತ್ಯಾಸತ್ಯತೆ ಅರಿಯದೆ ನಮ್ಮ ವಿರುದ್ಧ ಪ್ರಸಾರ ವಾಗಬಾರದು ಎಂದು ಕೋರ್ಟಿಗೆ ತಡೆಯಾಜ್ಞೆ ಅರ್ಜಿ ಸಲ್ಲಿಸಿದ್ದೇವೆ. ಸತ್ಯಮೇವ ಜಯತೆ ಎಂದು ಅವರು ಹೇಳಿದ್ದಾರೆ.

whatsapp

ಇತ್ತೀಚಿನ ಸುದ್ದಿ

Exit mobile version