ವಿಚಾರಣೆಗೆ ಹಾಜರಾಗದ ನಟ ದರ್ಶನ್ ಗೆ ಕೋರ್ಟ್ ಎಚ್ಚರಿಕೆ!

ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ವಿಚಾರಣೆ ಇಂದು ಬೆಂಗಳೂರಿನ ಸಿಸಿಎಚ್ 57ನೇ ನ್ಯಾಯಾಲಯದಲ್ಲಿ ನಡೆಯಿತು. ಆದರೆ ನಟ ದರ್ಶನ್ ಇಂದು ಕೋರ್ಟ್ ಗೆ ಹಾಜರಾಗದ ಹಿನ್ನೆಲೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತು.
ದರ್ಶನ್ ಪರ ವಕೀಲರಿಗೆ ಎಚ್ಚರಿಕೆ ನೀಡಿದ ನ್ಯಾಯಾಲಯ ವಿಚಾರಣೆ ಇದ್ದಾಗ ಕಡ್ಡಾಯವಾಗಿ ಹಾಜರಾಗಬೇಕು ಎಂದು ಹೇಳಿತು. ಬೆನ್ನು ನೋವಿನ ಕಾರಣ ನೀಡಿ ನ್ಯಾಯಾಲಯದ ವಿಚಾರಣೆಯಿಂದ ದರ್ಶನ್ ವಿನಾಯಿತಿ ಕೋರಿದ್ದರು.
ಡೆವಿಲ್ ಚಿತ್ರದ ಸಿನಿಮಾ ಶೂಟಿಂಗ್ ರಾಜಸ್ಥಾನದಲ್ಲಿ ನಡೆದಿತ್ತು. ಅಲ್ಲಿ 28 ಗಂಟೆಗಳ ಕಾಲ ನಿರಂತರವಾಗಿ ಚಿತ್ರೀಕರಣದಲ್ಲಿ ದರ್ಶನ್ ಭಾಗಿಯಾಗಿದ್ದ ಹಿನ್ನೆಲೆ ಮತ್ತೆ ಬೆನ್ನುನೋವು ಕಾಣಿಸಿಕೊಂಡಿತ್ತು. ಹೀಗಾಗಿ ಇಂದು ವಿಚಾರಣೆಗೆ ಗೈರು ಹಾಜರಾಘಿದ್ದರು.
ಈ ವಿಷಯವನ್ನು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಹೈಕೊರ್ಟ್ ಜಾಮೀನು ಷರತ್ತಿನಲ್ಲಿ ಬೆಂಗಳೂರು ವ್ಯಾಪ್ತಿ ಬಿಟ್ಟು ತೆರಳಲು ಅನುಮತಿ ನೀಡಿತ್ತು ಎಂದು ತಿಳಿಸಿ ಆದೇಶ ಪ್ರತಿಯನ್ನು ನ್ಯಾಯಾಧೀಶರಿಗೆ ವಕೀಲರು ನೀಡಿದರು. ಆದರೆ ಸಮಜಾಯಿಷಿಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಧೀಶರು, ವಿಚಾರಣೆ ವೇಳೆ ಆರೋಪಿಗಳು ಕಡ್ಡಾಯವಾಗಿ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD