ಸೌಜನ್ಯ ಅತ್ಯಾಚಾರ—ಕೊಲೆ ಪ್ರಕರಣ: 11 ವರ್ಷಗಳ ಬಳಿಕ ಪ್ರಕಟವಾಗಲಿದೆ ತೀರ್ಪು
ರಾಷ್ಟ್ರಮಟ್ಟದಲ್ಲಿ ಬಹಳ ಸುದ್ದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ (17) ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ್ದ ಪ್ರಕರಣದ ತೀರ್ಪು 11 ವರ್ಷಗಳ ಬಳಿಕ ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ನಿಂದ ಜೂನ್ 16 ರಂದು ಪ್ರಕಟವಾಗಲಿದೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿಯ ಎರಡನೇ ಮಗಳು ಸೌಜನ್ಯ (17) ಕಾಲೇಜು ಮುಗಿಸಿ ಮನೆಗೆ ವಾಪಸ್ ಹೋಗುವಾಗ 9–10–2012 ರಂದು ಸಂಜೆ 4:15 ಕ್ಕೆ ನಾಪತ್ತೆಯಾಗಿದ್ದಳು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
10-10-2012 ರಂದು ರಾತ್ರಿ 10:30ಕ್ಕೆ ಧರ್ಮಸ್ಥಳ ಮಣ್ಣಸಂಖದಲ್ಲಿ ಸೌಜನ್ಯ ಶವ ಪತ್ತೆಯಾಗಿತ್ತು. ಬಳಿಕ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ರೇಪ್ & ಮರ್ಡರ್ ಪ್ರಕರಣ ದಾಖಲಾಗಿತ್ತು. 11—10–2012 ರಂದು ಪ್ರಕರಣದ ಆರೋಪಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಹೌಸಿಂಗ್ ಕಾಲೋನಿಯ ಸಂತೋಷ್ ರಾವ್ (38) ಬಾಹುಬಲಿ ಬೆಟ್ಟದ ಗುಡ್ಡದಲ್ಲಿ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದ. ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದರು.
ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಪ್ರತಿಭಟನೆ ಜೋರಾಗಿದ್ದರಿಂದ ಪ್ರಕರಣವನ್ನು ರಾಜ್ಯ ಸರಕಾರ ಸಿಐಡಿಗೆ ನೀಡಿತ್ತು. ಪ್ರಕರಣದ ಆರೋಪಿ ಸಂತೋಷ್ ರಾವ್ ಬೆಂಗಳೂರು ಸಿಬಿಐ ಕೋರ್ಟ್ ಗೆ ಆರು ಬಾರಿಗೂ ಹೆಚ್ಚು ಹಾಜರಾಗದೆ ತಲೆಮರೆಸಿಕೊಂಡಿದ್ದ. ಪ್ರಕರಣ ನಡೆದು 11 ವರ್ಷಗಳ ಬಳಿಕ ಜೂನ್ 16 ರಂದು ಈ ಪ್ರಕರಣದ ತೀರ್ಪು ಪ್ರಕಟವಾಗಲಿದೆ. ಹೀಗಾಗಿ ಈ ಪ್ರಕರಣದ ತೀರ್ಪಿನ ಸುತ್ತ ಜನರ ಕುತೂಹಲ ಹೆಚ್ಚಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























