ಕೊವಿಡ್ 3ನೇ ಅಲೆಗೆ ಈಗಲೇ ಸಿದ್ಧತೆ: ಪೋಷಕರೇ ನೀವು ತಿಳಿದುಕೊಳ್ಳಲೇ ಬೇಕಾದ ಮಾಹಿತಿ - Mahanayaka
11:07 AM Thursday 21 - August 2025

ಕೊವಿಡ್ 3ನೇ ಅಲೆಗೆ ಈಗಲೇ ಸಿದ್ಧತೆ: ಪೋಷಕರೇ ನೀವು ತಿಳಿದುಕೊಳ್ಳಲೇ ಬೇಕಾದ ಮಾಹಿತಿ

covid 19 3 wave in india
10/06/2021


Provided by

ನವದೆಹಲಿ: ಕೊರೊನಾ ಎರಡನೇ ಅಲೆಯ ಭೀತಿ ದೂರವಾಗುತ್ತಿದ್ದಂತೆಯೇ  3ನೇ ಅಲೆಗೆ ಈಗಲೇ ಸರ್ಕಾರ ಸಿದ್ಧವಾಗುತ್ತಿದೆ. ಮೂರನೇ ಅಲೆಯಲ್ಲಿ ಮಕ್ಕಳೇ ಕೊರೊನಾ ವೈರಸ್ ಗೆ ಟಾರ್ಗೆಟ್ ಆಗಿದೆ ಎಂದು ಕೆಲವು ತಜ್ಞರು ಹೇಳಿದ್ದಾರೆ. ಆದರೆ ಇದು ಇನ್ನು ಕೂಡ ಸ್ಪಷ್ಟವಾಗಿಲ್ಲ. ಆದರೂ ಸಮಸ್ಯೆ ಉಂಟಾದ ಬಳಿಕ ಪರಿತಪಿಸುವುದಕ್ಕಿಂತಲೂ ಅದಕ್ಕೂ  ಮುನ್ನವೇ ಮುನ್ನೆಚ್ಚರಿಕೆ ವಹಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

18 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಕೊರೊನಾ ಬಂದರೆ, ಏನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸರ್ಕಾರ ಸಾರ್ವಜನಿಕ ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಿದೆ. ಈ ಮಾರ್ಗ ಸೂಚಿಯಲ್ಲಿ ಮಕ್ಕಳಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಯಾವೆಲ್ಲ ಕ್ರಮಗಳನ್ನು ಹಾಗೂ ಮುನ್ನೆಚ್ಚರಿಕೆ ವಹಿಸಬೇಕು ಎಂದು ವಿವರಿಸಿದೆ.

ಮಾರ್ಗ ಸೂಚಿಯಲ್ಲಿ,  ಮಕ್ಕಳಲ್ಲಿ ರೆಮ್ಡೆಸಿವಿರ್ ಬಳಕೆ ಮಾಡುವಂತಿಲ್ಲ ಹಾಗೂ ಎಚ್‌ ಆರ್‌ಸಿಟಿ ಇಮೇಜಿಂಗ್‌ ನ ತರ್ಕಬದ್ಧ ಬಳಕೆ ಮಾಡುವಂತೆ ಸೂಚನೆ ನೀಡಲಾಗಿದೆ. ಮಕ್ಕಳಲ್ಲಿ ಸ್ಟೆರಾಯ್ಡ್ ಬಳಕೆ ಮಾಡುವಂತಿಲ್ಲ ಆರೋಗ್ಯ ಸಚಿವಾಲಯದ ಅಧೀನದಲ್ಲಿರುವ ಆರೋಗ್ಯ ಸೇವೆಗಳ ನಿರ್ದೇಶನಾಲಯ (ಡಿಜಿಎಚ್‌ಎಸ್) ಮಾರ್ಗಸೂಚಿ ಹೊರಡಿಸಿದ್ದು, ಇದರ ಪ್ರಕಾರ ಮಕ್ಕಳಲ್ಲಿ ಸೌಮ್ಯ ಲಕ್ಷಣಗಳಿರುವ ಹಾಗೂ ಲಕ್ಷಣರಹಿತ ಸೋಂಕಿನ ಪ್ರಕರಣದಲ್ಲಿ ಸ್ಟೆರಾಯ್ಡ್‌ಗಳ ಬಳಕೆ ಹಾನಿಕಾರಕವಾಗಬಹುದು ಎಂದು ತಿಳಿಸಿದೆ. ಗಂಭೀರ ಪ್ರಕರಣಗಳಲ್ಲಿ ಮಾತ್ರ, ಆಸ್ಪತ್ರೆಗೆ ಸೇರಿದ ಮಕ್ಕಳಿಗೆ ಸ್ಟೆರಾಯ್ಡ್‌ ಬಳಸಬಹುದು ಎಂದು ಹೇಳಿದೆ.

5 ವರ್ಷಕ್ಕಿಂತ ಕೆಳಗಿನ ಮಕ್ಕಳು ಮಾಸ್ಕ್ ಹಾಕಿಕೊಳ್ಳುವಂತಿಲ್ಲ. ಪೋಷಕರ ಮತ್ತು ವೈದ್ಯರ ನಿಗಾದಡಿ 6ರಿಂದ 11 ವರ್ಷದೊಳಗಿನ ಮಕ್ಕಳು ಮಾಸ್ಕ್ ಧರಿಸಬಹುದು. ಪೋಷಕರು ತಾವೇ ಮಕ್ಕಳಿಗೆ ಮಾತ್ರೆಗಳನ್ನು ನೀಡುವಂತಿಲ್ಲ ಎಂದು ಹೇಳಿದ್ದು, ಎಚ್ ಆರ್ ಸಿಟಿ ಸ್ಕ್ಯಾನ್ ಅನ್ನು ಮಕ್ಕಳಿಗೆ ಸುಖಾ ಸುಮ್ಮನೆ ಬಳಸಬೇಡಿ ಎಂದು ಹೇಳಿದ್ದು, ಅತಿ ಅಗತ್ಯವಿದ್ದರೆ ಮಾತ್ರ, ಗಂಭೀರ ಪ್ರಕರಣದಲ್ಲಿ ಎ ಚ್‌ಆರ್‌ ಸಿಟಿ ಸ್ಕ್ಯಾನ್‌ ಬಳಸಬಹುದು. ಅದರಿಂದ ಪಡೆದ ಹೆಚ್ಚುವರಿ ಮಾಹಿತಿ ಆಧಾರದ ಮೇಲೆ ಚಿಕಿತ್ಸೆ ಕುರಿತು ನಿರ್ಧಾರ ಮಾಡಲಾಗುತ್ತದೆ ಎಂದು ತಿಳಿಸಿದೆ.

ಮಕ್ಕಳಲ್ಲಿ ಕೊರೋನಾ ಸೋಂಕು ಲಕ್ಷಣರಹಿತವಾಗಿದ್ದು ಪಾಸಿಟಿವ್ ಇದ್ದರೆ, ಕೋವಿಡ್ ಸೂಕ್ತ ನಡವಳಿಕೆ ಮತ್ತು ಪೌಷ್ಟಿಕ ಆಹಾರವನ್ನು ಸೂಚಿಸಲಾಗಿದೆ, ಆದರೆ ಯಾವುದೇ ನಿರ್ದಿಷ್ಟ ಔಷಧಿಗಳನ್ನು ಮಾರ್ಗಸೂಚಿಗಳಲ್ಲಿ ಉಲ್ಲೇಖಿಸಲಾಗಿಲ್ಲ.

ದೊಡ್ಡ ಮಕ್ಕಳು ಮತ್ತು ಹದಿಹರೆಯದವರಲ್ಲಿ ಸೌಮ್ಯವಾದ ಸೋಂಕಿಗೆ, ಜ್ವರ ಮತ್ತು ಗಂಟಲು ನೋವು ಇದ್ದರೆ ಪ್ರತಿ ನಾಲ್ಕರಿಂದ ಆರು ಗಂಟೆಗಳಿಗೊಮ್ಮೆ ಪ್ಯಾರಸಿಟಮಾಲ್ ಡೋಸ್ ಮತ್ತು ಕೆಮ್ಮು ಇದ್ದರೆ ಬೆಚ್ಚಗಿನ ಲವಣಯುಕ್ತ ಗಾರ್ಗಲ್‌ಗಳನ್ನು ಮಾಡಿಕೊಳ್ಳಲು ಮಾರ್ಗಸೂಚಿಯಲ್ಲಿ ಶಿಫಾರಸು ಮಾಡಲಾಗಿದೆ. ಆದರೂ, ಮಧ್ಯಮ ಪ್ರಮಾಣದ ಸೋಂಕು ಲಕ್ಷಣ ಹೊಂದಿರುವ ಮಕ್ಕಳಿಗೆ ತಕ್ಷಣದ ಚಿಕಿತ್ಸೆಯನ್ನು ಪ್ರಾರಂಭಿಸಲು ಶಿಫಾರಸು ಮಾಡಲಾಗಿದೆ.

ತೀವ್ರವಾದ ಕೋವಿಡ್ -19 ಸೋಂಕಿತ ಮಕ್ಕಳಲ್ಲಿ ಉಸಿರಾಟದ ತೊಂದರೆ ಹೊಂದಿದ್ದರೆ, ಸೂಕ್ತ ಚಿಕಿತ್ಸೆ ಕೊಡಿಸುವ ಅಗತ್ಯವಿದೆ ಎಂದು ಮಾರ್ಗಸೂಚಿಗಳು ತಿಳಿಸಿವೆ. ಪೋಷಕರು ಅಥವಾ ಪಾಲಕರ ಮೇಲ್ವಿಚಾರಣೆಯಲ್ಲಿ 12 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಆರು ನಿಮಿಷಗಳ ನಡಿಗೆ ಸಹ ಇದು ಶಿಫಾರಸು ಮಾಡಿದೆ.

ಮಕ್ಕಳಿಗೆ ಪಲ್ಸ್​ ಆಕ್ಸಿಮೀಟರ್ ಅಳವಡಿಸಿ 6 ನಿಮಿಷ ನಡಿಗೆಗೆ ಸೂಚಿಸಬೇಕು, 6 ನಿಮಿಷ ನಡಿಗೆಯ ಮೂಲಕ ದೇಹದ ಆಕ್ಸಿಜನ್ ಮಟ್ಟದ ಮೇಲೆ ನಿಗಾ ವಹಿಸಿ. ಉಸಿರಾಟದ ಸಮಸ್ಯೆ ಕಾಣಿಸಿಕೊಂಡರೆ ತಕ್ಷಣವೇ ಚಿಕಿತ್ಸೆ ದೊರಕಿಸಬೇಕು ಎಂದು ಮಾರ್ಗಸೂಚಿ ಹೇಳಿದೆ.

ಇತ್ತೀಚಿನ ಸುದ್ದಿ