ಹೆಚ್ಚುತ್ತಿದೆ ಕೋವಿಡ್ ಪ್ರಕರಣಗಳು: ಈ ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ - Mahanayaka

ಹೆಚ್ಚುತ್ತಿದೆ ಕೋವಿಡ್ ಪ್ರಕರಣಗಳು: ಈ ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ

mask
23/05/2025


Provided by

ನವದೆಹಲಿ:  ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾದ ಹಿನ್ನೆಲೆ ಆಂಧ್ರಪ್ರದೇಶದಲ್ಲಿ ಮಾಸ್ಕ್ ಧರಿಸುವಿಕೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಜಾರಿ ಮಾಡಿದೆ.

ಜನರ ಗುಂಪು, ಸಭೆ ಸಮಾರಂಭಗಳಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್‌ (Mask) ಧರಿಸುವಂತೆ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿದೆ.

ದೇಶದಲ್ಲಿ ಮತ್ತೆ ನಿಧಾನಗತಿಯಲ್ಲಿ ಕೊವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಆಂಧ್ರಪ್ರದೇಶದಲ್ಲಿ ನಿನ್ನೆ ಒಂದೇ ದಿನದಲ್ಲಿ 19ಕ್ಕೂ ಹೆಚ್ಚು ಪಾಸಿಟಿವ್ ಕೇಸ್ ದಾಖಲಾಗಿದೆ.

ಇನ್ನೂ ಗುಜರಾತ್ ನಲ್ಲೂ 15 ಮಂದಿಗೆ ಕೋವಿಡ್ ಸೋಂಕು ತಗುಲಿದೆ. ಕೇರಳದಲ್ಲಿ 186 ಪ್ರಕರಣಗಳು ದಾಖಲಾಗಿದ್ದು, 95 ಸಕ್ರಿಯ ಪ್ರಕರಣಗಳು ಇವೆ. ಕರ್ನಾಟಕದಲ್ಲಿ 33 ಕೇಸ್ ದಾಖಲಾಗಿದ್ದು, 16 ಸಕ್ರಿಯ ಪ್ರಕರಣಗಳು ವರದಿಯಾಗಿವೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ