ಶಾಕಿಂಗ್ ನ್ಯೂಸ್: ಕೊವಿಡ್ ಆಸ್ಪತ್ರೆಯಲ್ಲಿ ಅಗ್ನಿದುರಂತ | 10 ಜನರ ದಾರುಣ ಸಾವು - Mahanayaka

ಶಾಕಿಂಗ್ ನ್ಯೂಸ್: ಕೊವಿಡ್ ಆಸ್ಪತ್ರೆಯಲ್ಲಿ ಅಗ್ನಿದುರಂತ | 10 ಜನರ ದಾರುಣ ಸಾವು

15/11/2020


Provided by

ರುಮೇನಿಯಾ: ಕೊವಿಡ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅಗ್ನಿ ದುರಂತ ಸಂಭವಿಸಿದ ಪರಿಣಾಮ 10 ಜನರು ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

 ರುಮೇನಿಯಾದ ರಾಜಧಾನಿ ಬುಚರೆಸ್ಟ್ ನಿಂದ 353 ಕಿ,ಮೀ ದೂರದ ಪಿಯಾಟ್ರಾ ನೀಮ್ಟ್ ನಲ್ಲಿನ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಹತ್ತು ಮಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇತ್ತೀಚಿನ ಸುದ್ದಿ