ಕೊವಿಡ್ ಆಸ್ಪತ್ರೆಯಲ್ಲಿ ಅಗ್ನಿದುರಂತ | 12 ರೋಗಿಗಳು ಸಜೀವ ದಹನ - Mahanayaka
9:03 AM Thursday 29 - January 2026

ಕೊವಿಡ್ ಆಸ್ಪತ್ರೆಯಲ್ಲಿ ಅಗ್ನಿದುರಂತ | 12 ರೋಗಿಗಳು ಸಜೀವ ದಹನ

covid hospital
23/04/2021

ಮುಂಬೈ: ಕೊವಿಡ್ ಆಸ್ಪತ್ರೆಯಲ್ಲಿ ನಡೆದ ಭೀಕರ ಅಗ್ನಿ ಅವಘಡದಲ್ಲಿ 12 ಮಂದಿ ಮೃತಪಟ್ಟು ಹಲವಾರು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಮುಂಬೈನ  ವಾಶಿ ವಿರಾರ್ ವಿಜಯ ವಲ್ಲಭ್ ಆಸ್ಪತ್ರೆಯಲ್ಲಿ ನಡೆದಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಆರಂಭವಾಗಿದೆ. ದೊಡ್ಡ ಮಟ್ಟದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಆಸ್ಪತ್ರೆಯ ಐಸಿಯು ವಾರ್ಡ್ ನಲ್ಲಿ ಈ ದುರಂತ ಸಂಘವಿಸಿದ್ದು, ಕೊವಿಡ್ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಭಾರೀ ಸಂಖ್ಯೆಯಲ್ಲಿ ರೋಗಿಗಳಿದ್ದರು. ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯರು ಹರಸಾಹಸ ಪಡೆಯುತ್ತಿರುವ ನಡುವೆಯೇ ಅಗ್ನಿದುರಂತ ಕೂಡ ಸಂಭವಿಸಿದೆ.

ಇನ್ನೂ ಘಟನೆಯಲ್ಲಿ ಮೃತಪಟ್ಟಿರುವ 12  ರೋಗಿಗಳ ಗುರುತು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಮೃತದೇಹಗಳು ಸುಟ್ಟು ಕರಕಲಾಗಿದ್ದು, ಗುರುತು ಪತ್ತೆ ಕಷ್ಟಕರವಾಗಿದೆ.

ಇತ್ತೀಚಿನ ಸುದ್ದಿ