3:20 PM Thursday 15 - January 2026

ಕೊರೊನಾ ಸ್ಫೋಟ: ಎಸ್ಟೇಟ್ ಗಳಲ್ಲಿ ಕೆಲಸ ಮಾಡುತ್ತಿರುವ 23 ಮಂದಿಗೆ ಕೊವಿಡ್ ದೃಢ

covid
30/12/2021

ಹಾಸನ: ಜಿಲ್ಲೆಯಲ್ಲಿ ಕೊರೊನಾ ಸ್ಫೋಟವಾಗಿದ್ದು,  ಎಸ್ಟೇಟ್ ಗಳಲ್ಲಿ ಕೆಲಸ ಮಾಡುತ್ತಿರುವ 23 ಮಂದಿಗೆ ಕೊವಿಡ್ ದೃಢಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ದೇವಿಹಳ್ಳಿ ಎಸ್ಟೇಟ್ ಹಾಗೂ ಆನೆಮಹಲ್ ಎಸ್ಟೇಟ್ ​ನಲ್ಲಿ‌ ಕೆಲಸ ಮಾಡುತ್ತಿರುವ ಕಾರ್ಮಿಕರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕಳೆದ ವಾರ ಇಬ್ಬರು ಕಾರ್ಮಿಕರು ಪಶ್ಚಿಮ ಬಂಗಾಳಕ್ಕೆ ತೆರಳಿ ಸಕಲೇಶಪುರಕ್ಕೆ ವಾಪಸಾಗಿದ್ದರು. ಈ ವೇಳೆ ಎಸ್ಟೇಟ್​ ನಲ್ಲಿ ಕೆಲಸ ಮಾಡುವ ಎಲ್ಲರನ್ನೂ ಪರೀಕ್ಷೆಗೊಳಪಡಿಸಲಾಗಿದ್ದು, 35 ಕೂಲಿ ಕಾರ್ಮಿಕರಲ್ಲಿ 23 ಮಂದಿಗೆ ಸೋಂಕು ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

ಸದ್ಯ ಎಸ್ಟೇಟ್​ಗಳಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪಕ್ಷ ಏನೇ ತೀರ್ಮಾನ ತೆಗೆದುಕೊಂಡರೂ ಅದಕ್ಕೆ ಬದ್ಧ ಎಂದ ಈಶ್ವರಪ್ಪ!

ಮಂಗಳೂರು: ಧಾರ್ಮಿಕ ಕೇಂದ್ರಗಳ ಕಾಣಿಕೆ ಡಬ್ಬಿಗಳಿಗೆ ಕಾಂಡೋಮ್ ಹಾಕುತ್ತಿದ್ದ ವ್ಯಕ್ತಿ ಅರೆಸ್ಟ್

ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದ ಲೈನ್ ಮ್ಯಾನ್!

“ಡಿಸೆಂಬರ್ 31ರಂದು ಕರ್ನಾಟಕ ಬಂದ್ ಫಿಕ್ಸ್, ಬದಲಾವಣೆಯ ಮಾತೇ ಇಲ್ಲ”

ಮನುಷ್ಯರನ್ನೇ ಹೋಲುವ ಮರಿಗೆ ಜನ್ಮ ನೀಡಿದ ಮೇಕೆ!

ಇತ್ತೀಚಿನ ಸುದ್ದಿ

Exit mobile version