ಭಾರತದ 100 ಸ್ವಯಂ ಸೇವಕರ ಮೇಲೆ ಕೊವಿಡ್ ಲಸಿಕೆ ಪ್ರಯೋಗ
ನವದೆಹಲಿ: ರಷ್ಯಾದಲ್ಲಿ ಅಭಿವೃದ್ಧಿಪಡಿಸಿರುವ ಕೊವಿಡ್ 19 ಪ್ರಾಯೋಗಿಕ ಲಸಿಕೆ ‘ಸ್ಪುಟ್ನಿಕ್ ವಿ’ನ್ನು ಭಾರತದ 100 ಸ್ವಯಂ ಸೇವಕರ ಮೇಲೆ ಪ್ರಯೋಗ ನಡೆಸಲಾಗುವುದು ಎಂದು ವರದಿಯಾಗಿದೆ.
ಈ ವಿಚಾರವನ್ನು ಭಾರತೀಯ ಔಷಧ ನಿಯಂತ್ರಣ ಸಂಸ್ಥೆ ಹೇಳಿದೆ ಎಂದು ವರದಿಯಾಗಿದೆ. ಭಾರತದಲ್ಲಿ ‘ಸ್ಪುಟ್ನಿಕ್-ವಿ’ ಲಸಿಕೆ ಮಾರಾಟ ಹಾಗೂ ಕ್ಲಿನಿಕಲ್ ಟ್ರಯಲ್ಸ್ ನಡೆಸಲು ರಷ್ಯಾದ ಡೈರೆಕ್ಟ್ ಇನ್ವೆಸ್ಟ್‌ಮೆಂಟ್ ಫಂಡ್ ಹೈದರಾಬಾದ್‌ನ ರೆಡ್ಡೀಸ್ ಲ್ಯಾಬೊರೇಟರಿ ಜೊತೆ ಒಪ್ಪಂದ ಮಾಡಿಕೊಂಡಿತ್ತು.
ಭಾರತದಲ್ಲಿ ಸ್ಪುಟ್ನಿಕ್ ವಿ ಲಸಿಕೆಯನ್ನು ಮಾನವನ ಮೇಲೆ ಪ್ರಯೋಗ ಮಾಡುವುದಕ್ಕೆ ಡಿಜಿಸಿಐಯಿಂದ ಅನುಮತಿ ಲಭಿಸಿದೆ ಎಂದು ಹೇಳಲಾಗಿದೆ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.