ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಹಸುಗೂಸು ಸಾವು

ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಹಸುಗೂಸೊಂದು ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಕಾವೂರು ಎಂಬಲ್ಲಿ ನಡೆದಿದೆ.
ಮೂಲತಃ ಜಾರ್ಖಂಡ್ ನಿವಾಸಿ ಸದ್ಯ ಕಾವೂರು ಮಸೀದಿ ಬಳಿ ವಾಸವಿರುವ ಫಿರೋಝ್ ಅನ್ಸಾರಿ ಮತ್ತು ಕಿತಾಬುನ್ ದಂಪತಿಯ ಪುತ್ರಿ ಆಯಿಶಾ (20 ತಿಂಗಳು) ಎಂದು ತಿಳಿದು ಬಂದಿದೆ.
ಮನೆಯಲ್ಲಿ ಅರ್ಧ ನೀರು ತುಂಬಿಸಿಟ್ಟಿದ್ದ ಬಕೆಟ್ ಬಳಿ ಆಟವಾಡುತ್ತಿದ್ದ ಮಗು ಬಕೆಟ್ ಗೆ ಬಿದ್ದು ಉಸಿರುಗಟ್ಟಿ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.ಘಟನೆ ಸಂಬಂಧ ಕಾವೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw